ಪುತ್ತೂರು: ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪವಿಭಾಗದಾದ್ಯಂತ ಇಂದು ಮಧ್ಯಾಹ್ನದಿಂದ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪುತ್ತೂರು ಉಪವಿಭಾಗ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕಿಗೆ ಅನ್ವಯಿಸಿ ನಿಷೇಧಾಜ್ಞೆ ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ. ಡಿ.17ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಂತರ ಮುಂದಿನ ಪರಿಸ್ಥಿತಿ ಅವಲೋಕಿಸಿ ವಿಸ್ತರಿಸುವ ಸಾದ್ಯತೆಗಳಿವೆ