DAKSHINA KANNADA
ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳು ಪತ್ತೆ, ಶಿರಾಡಿಗೆ ವಾರದೊಳಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ..!
ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳು ಪತ್ತೆ, ಶಿರಾಡಿಗೆ ವಾರದೊಳಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ..!
ಮಂಗಳೂರು: ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳನ್ನು ಪತ್ತೆ ಹಚ್ಚಲಾಗಿದ್ದು ಅವುಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತಾಡಿದ ಬೊಮ್ಮಾಯಿ ಭಯೋತ್ಪಾದನೆಯನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಸರ್ಕಾರ ಬದ್ದವಾಗಿದ್ದು ದೊಡ್ಡ ಪ್ರಮಾಣದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳನ್ನು ಪತ್ತೆ ಹಚ್ಚಲಾಗಿದ್ದು ಅವುಗಳ ಮೇಲೆ ಕ್ರಮ ಕೈಗೊಳ್ಳಲಾಗಿದ್ದು ಇದೊಂದು ನಿರಂತರ ಪ್ರಕ್ರಿಯೆಯಾಗಿದೆ.
ಉಗ್ರರಿಗೆ ಇರುವ ಸಂಪರ್ಕ, ಹಣಕಾಸಿನ ನೆರವಿನ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ತನಿಖೆ ನಡೆಸುತ್ತಿದ್ದು, ರಾಜ್ಯ ಪೊಲೀಸರು ಎನ್ಐಎ ಯೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.
ಶಿರಾಡಿ ಘಾಟ್ ದುರಸ್ತಿ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ವಾರದೊಳಗೆ ವಿಶೇಷ ಸಭೆ ಕರೆಸಿ ಯಾವ ಕಾರಣದಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದು ಚರ್ಚಿಸಲಾಗುವುದು.
ಡಾಂಬರೀಕರಣ, ವೈಟ್ ಟಾಪಿಂಗ್ ಹಾಗೂ ಸುರಂಗ ಮಾಡುವ ಬಗ್ಗೆ ಸಮಗ್ರವಾಗಿ ಈ ವಾರದಲ್ಲಿ ಚರ್ಚಿಸಿ ಪರಿಹಾರ ಒದಗಿಸಿಕೊಡಲಾಗುವುದು ಎಂದರು.
ಮಹಾರಾಷ್ಟ್ರ ಮತ್ತು ರಾಜ್ಯ ಗಡಿ ವಿವಾದದಿಂದ ಉಂಟಾಗಿದ್ದ ಸಮಸ್ಯೆಯಿಂದ ಸ್ಥಗಿತವಾಗಿದ್ದ ಅಂತರ್ ರಾಜ್ಯ ಬಸ್ ಸಂಚಾರ ಮತ್ತೆ ಆರಂಭವಾಗಿದ್ದು ಮಹಾರಾಷ್ಟ್ರಕ್ಕೆ ಎಲ್ಲಾ ಬಸ್ಗಳು ಓಡಾಡುತ್ತಿವೆ.
ಇನ್ನಷ್ಟು ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಡಿ.14 ರಂದು ಈ ಬಗ್ಗೆ ಸರ್ಚಿಸಲು ಕೇಂದ್ರ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ನಮ್ಮ ರಾಜ್ಯದ ಸಂಸದರು ಗೃಹಸಚಿವರನ್ನು ಭೇಟಿ ಈ ಬಗ್ಗೆ ಮನವರಿಕೆ ಮಾಡಲಿದ್ದಾರೆ. ಕರ್ನಾಟಕ ಹಿತರಕ್ಷಣೆ ಮಾಡಲು ಸರ್ಕಾರ 100 ಶೇಕಡದಷ್ಟು ಬದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
DAKSHINA KANNADA
ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
ದಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.
ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್ ಸೀರಿಯಲ್…! ಪ್ರೋಮೋ ರಿಲೀಸ್..!
ಮಲಯಾಳಂ ಸಿನಿಮಾದಲ್ಲಿ ಬಿಝಿ :
‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.
ಮಲಯಾಳಂನಲ್ಲಿ RIAL 5- ಹಾರರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.
DAKSHINA KANNADA
ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.
ಇದನ್ನೂ ಓದಿ : ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
DAKSHINA KANNADA
ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ. ಈತ ಸಣ್ಣ ಸಣ್ಣ ಪ್ಯಾಕೆಟ್ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.