Wednesday, December 1, 2021

20 ರ ಯುವತಿಯ ಅತ್ಯಾಚಾರ ಯತ್ನ – 15 ವರ್ಷದ ಬಾಲಕನ ಬಂಧನ..!

ಮಲಪ್ಪುರಂ : 20 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಕೇರಳ ಪೊಲೀಸರ ಬಂಧಿಸಿದ್ದಾರೆ.

15 ವರ್ಷದ ಬಾಲಕನಿಂದ ಈ ಕೃತ್ಯ ನಡೆದಿದ್ದು ಯತ್ನ ವಿಫಲವಾಗಿದ್ದಕ್ಕೆ ಅಪ್ರಾಪ್ತ ಆರೋಪಿ ಯುವತಿ ಮುಖಕ್ಕೆ ಕಲ್ಲಿನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿದ್ದಾನೆ.

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿಯ ಕೊಟ್ಟುಕರ ಎಂಬ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಕೊಟ್ಟುಕರ ನಿವಾಸಿಯಾಗಿರುವ ಯುವತಿಯನ್ನು ಅದೇ ಊರಿನ ಬಾಲಕ ಹಿಂಬಾಲಿಸಿ, ಆಕೆಯನ್ನು ಏಕಾಏಕಿ ರಸ್ತೆ ಬದಿಗೆ ಎಳೆದುಕೊಂಡು ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.

ಆತನಿಂದ ಹಲ್ಲೆಗೊಳಗಾದ ಯುವತಿ ಕಿರುಚಾಡುತ್ತಾ, ಸಹಾಯ ಕೋರಿ ಸಮೀಪದ ಮನೆಯೊಂದಕ್ಕೆ ಓಡಿ ಬಂದು ಆಶ್ರಯ ಪಡೆದಿದ್ದಾಳೆ. ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದ.

ಆತ ಅಲ್ಲಿಯೇ ಬಿಟ್ಟಿದ್ದ ಚಪ್ಪಲಿ ವಶಪಡಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಯನ್ನು ಹಿಡಿದಿದ್ದು ಪೊಲೀಸ ವಿಚಾರಣೆಯಲ್ಲಿ ಆತ ತಪ್ಪೊಪ್ಪಿಕೊಂಡಿದ್ದಾನೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...