Wednesday, October 20, 2021

ದ.ಕ ಜಿಲ್ಲೆಯಲ್ಲೇ 1,579 ಅನಧಿಕೃತ ಧಾರ್ಮಿಕ ಕಟ್ಟಡಗಳಿವೆ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 6,395 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು (ದೇವಾಲಯ, ಮಸೀದಿ ಹಾಗೂ ಚರ್ಚ್) ಗುರುತಿಸಲಾಗಿದ್ದು, ಈ ಪೈಕಿ 2,989 ಕಟ್ಟಡ ತೆರವು ಬಾಕಿ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅನಧಿಕೃತ ಕಟ್ಟಡಗಳಿವೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.


ರಾಜ್ಯದಲ್ಲಿ ಈವರೆಗೆ 6,395 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು (ದೇವಾಲಯ, ಮಸೀದಿ ಹಾಗೂ ಚರ್ಚ್) ಗುರುತಿಸಲಾಗಿದ್ದು, ಈ ಪೈಕಿ 2,989 ಕಟ್ಟಡ (ಜುಲೈವರೆಗೆ) ತೆರವು ಬಾಕಿ ಇರುವುದಾಗಿ ತಿಳಿದು ಬಂದಿದೆ.
2009 ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದಾಗ ರಾಜ್ಯದಲ್ಲಿ 5,668 ಅನಧಿಕೃತ ಧಾರ್ಮಿಕ ಕಟ್ಟಡಗಳಿದ್ದವು.

2009ರಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ (ಸಕ್ರಮ, ತೆರವು, ಸ್ಥಳಾಂತರ) ಆದೇಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಈವರೆಗೆ 12 ವರ್ಷದಲ್ಲಿ 2,887 ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳನ್ನು ತೆರವುಗೊಳಿಸಲಾಗಿದೆ.

ಆದರೆ, ಇದೇ ಅವಧಿಯಲ್ಲಿ (2009 ಬಳಿಕ) 1,242 ಅನಧಿಕೃತ ಕಟ್ಟಡಗಳು ಮತ್ತೆ ತಲೆ ಎತ್ತಿವೆ. ಈ ಪೈಕಿ 1,054 ಕಟ್ಟಡಗಳನ್ನು ತೆರವುಗೊಳಿಸಲಾಗಿದ್ದು,

ಒಟ್ಟಾರೆ 2,989 ಅನಧಿಕೃತ ಕಟ್ಟಡಗಳು ತೆರವಿಗೆ ಬಾಕಿ ಇವೆ.
ದಕ್ಷಿಣ ಕನ್ನಡದಲ್ಲೇ ಹೆಚ್ಚು
ದಾಖಲೆಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,579 ಅನಧಿಕೃತ ಧಾರ್ಮಿಕ ಕಟ್ಟಡಗಳಿವೆ. ಬಳಿಕ ಶಿವಮೊಗ್ಗ 740, ಬೆಳಗಾವಿ 612, ಕೋಲಾರ 397, ಬಾಗಲಕೋಟೆ 352, ಧಾರವಾಡ 324, ಮೈಸೂರು 315, ಕೊಪ್ಪಳ 306 ಇದೆ.

2009 ಸೆಪ್ಟೆಂಬರ್ 29ರವರೆಗೆ ಒಂದೂ ಅನಧಿಕೃತ ಕಟ್ಟಡ ಹೊಂದಿರದ ಬಳ್ಳಾರಿಯಲ್ಲಿ ಕಳೆದ 12 ವರ್ಷದಲ್ಲಿ 410 ದೇವಾಲಯಗಳು ಸಾರ್ವಜನಿಕ ಸ್ಥಳಗಳಲ್ಲಿ ತಲೆ ಎತ್ತಿವೆ.

ಜಿಲ್ಲಾಡಳಿತ ಈಗಾಗಲೇ ಎಲ್ಲಾ ದೇವಾಲಯಗಳನ್ನೂ ತೆರವುಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...