ಮಂಗಳೂರು ನಗರಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮುಗಿಬಿದ್ದ ಸಿಸಿಬಿ :16 ಮಂದಿ ಬಂಧನ ಕಾರು ನಗದು ವಶ..!
ಮಂಗಳೂರು : ಮಂಗಳೂರು ನಗರದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಸಿಸಿಬಿ ತಂಡ ದಾಳಿ ನಡೆಸಿದೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ವಿಚಾರ ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿತ್ತು ,
ಈ ಹಿನ್ನೆಲೆಯಲ್ಲಿ ಸಿಸಿಬಿ ತಂಡ ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 4 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
3 ಪ್ರಕರಣಗಳು (ಬಂದರು) ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆ ಹಾಗೂ 1 ಪ್ರಕರಣ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ( ಪಾಂಡೇಶ್ವರ) ಯಲ್ಲಿ ದಾಖಲಾಗಿದೆ.
ಈ ಎಲ್ಲ ಪ್ರಕರಣದಲ್ಲಿ ಒಟ್ಟು 16 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ 28 ಮೊಬೈಲ್ ಹಾಗೂ 8 ಲಕ್ಷ ರೂ. ಮೌಲ್ಯದ 1 ಕಾರು ಹಾಗೂ 2,67,100 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ಯಾವುದೇ ರಿಕ್ರಿಯೇಶನ್ ಕ್ಲಬ್‌ಗಳನ್ನು ತೆರೆಯಲು ಅನುಮತಿ ಕೋರಿ ಯಾರೂ ಅರ್ಜಿ ಸಲ್ಲಿಸಿಲ್ಲ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ನಗರದಲ್ಲಿ ಯಾವುದಾದರೂ ಅನಧಿಕೃತ ಕ್ಲಬ್‌ಗಳು ನಡೆಯುತ್ತಿರುವುದರ ಅಥವಾ ಯಾವುದೇ ರೀತಿಯ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಮಾಹಿತಿ ಸಾರ್ವಜನಿಕರಿಗೆ ಇದ್ದಲ್ಲಿ ಪೊಲೀಸ್ ಇಲಾಖೆಗೆ ನೀಡಬೇಕು ಹಾಗೂ ಮಾಹಿತಿಯನ್ನು ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.