Connect with us

    ಉಡುಪಿ ಜಿಲ್ಲೆಯಲ್ಲಿ ಇಂದು 16 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆ..!!

    Published

    on

    ಉಡುಪಿ ಜಿಲ್ಲೆಯಲ್ಲಿ ಇಂದು 16 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆ..!!

    ಉಡುಪಿ: ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ನಿಲ್ಲುತ್ತಿಲ್ಲ. ಇಂದು (ಜುಲೈ 03) ಕೂಡಾ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 16 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

    ಸೋಂಕಿತರಲ್ಲಿ ಹೆಚ್ಚಿನವರಲ್ಲಿ ಸೋಂಕು ಲಕ್ಷಣಗಳು ಕಂಡುಬರದ ಹಿನ್ನಲೆಯಲ್ಲಿ ಬೇಗನೇ ಡಿಸ್ಚಾರ್ಜ್ ಆಗುತ್ತಿದ್ದಾರೆ.

    ಹೀಗಾಗಿ ಜಿಲ್ಲೆಯಲ್ಲಿ ಇದುವರೆಗೆ 1104 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸೋಂಕಿತರು ಮರಣ ಹೊಂದಿದ್ದಾರೆ.

    ಜಿಲ್ಲೆಯಲ್ಲಿ ಇದುವರೆಗೆ 16498 ಮಂದಿಯ ಗಂಟಲು ದ್ರವ ಸಂಗ್ರಹಿಸಿದ್ದು, ಅವರಲ್ಲಿ 13823 ಜನರ ವರದಿ ನೆಗಟಿವ್ ಬಂದಿದೆ.

    1258 ಜನರ ವರದಿ ಪಾಸಿಟಿವ್ ಆಗಿದೆ. ಇನ್ನೂ 1417 ಜನರ ಗಂಟಲು ದ್ರವ ಪರೀಕ್ಷಾ ವರದಿ ಜಿಲ್ಲಾಡಳಿತದ ಕೈ ಸೇರಬೇಕಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬೈಕ್ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್ ವಿದ್ಯಾರ್ಥಿ; ಪ್ರಕರಣದ ಬಳಿಕ ವಾರ್ನಿಂಗ್ ನೀಡಿದ ತಹಶೀಲ್ದಾರ್

    Published

    on

    ಕಡಬ : ಶಾಲೆಗೆ ಬೈಕ್ನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಬಾಲಕ ಮೃತ ಪಟ್ಟ ಘಟನೆ ನಿನ್ನೆ ಕಡಬದಲ್ಲಿ ನಡೆದಿತ್ತು. ಕಡಬದ ಕಲ್ಲುಗುಡ್ಡೆ ನಿವಾಸಿ ಅಶೀಶ್ ಎಂಬ 16 ವರ್ಷದ ವಿದ್ಯಾರ್ಥಿ ಅಪಘಾತದಲ್ಲಿ ಮೃತ ಪಟ್ಟಿದ್ದ.

    ಈ ಘಟನೆಯ ಬಳಿಕ ಕಡಬ ವ್ಯಾಪ್ತಿಯಲ್ಲಿ ಅನೇಕ ಅಪ್ರಾಪ್ತ ಯುವಕರು ಬೈಕ್ ಚಲಾಯಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಕಾರ್ಯಪ್ರವೃತ್ತರಾದ ಕಡಬ ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರರು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    ಆರ್‌ಟಿಒ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಅಪ್ರಾಪ್ತರು ಹಾಗೂ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಅಪ್ರಾಪ್ತರ ಕೈಲಿ ಬೈಕ್ ನೀಡಿದ ಪೋಷಕರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಬೈಕ್: ಸವಾರ ಸಾವು

    ಅಷ್ಟೇ ಅಲ್ಲದೆ ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ವಿದ್ಯಾರ್ಥಿಗಳು ತಾರದಂತೆ ಶಾಲಾ ಮುಖ್ಯೋಪಾಧ್ಯಯರು ಮತ್ತು ಪ್ರಾಂಶುಪಾಲರು ಸೂಚನೆ ನೀಡಬೇಕು ಹಾಗೂ ಪೋಷಕರಿಗೆ ಈ ಬಗ್ಗೆ ಸೂಚನೆ ನೀಡಬೇಕು.

    ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಆಡಳಿತ ಹಾಗೂ ಮುಖ್ಯಸ್ಥರನ್ನೇ ಹೊಣೆಯಾಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಡಬ , ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

    Continue Reading

    DAKSHINA KANNADA

    ಚಿನ್ನ ಕಡಿಮೆ ಬೆಲೆಗೆ ನೀಡುವವರ ಬಗ್ಗೆ ಎಚ್ಚರ; ಮಂಗಳೂರಿನಲ್ಲಿ ಅಂಗಡಿಯವರೊಬ್ಬರನ್ನು ವಂಚಿಸಲು ಯತ್ನ

    Published

    on

    ಮಂಗಳೂರು : ಕೃಷಿ ಮಾಡುವಾಗ ಭೂಮಿಯಲ್ಲಿ ನಿಧಿ ಸಿಕ್ಕಿದೆ. ನಮಗೆ ತುರ್ತಾಗಿ ಹಣ ಬೇಕಾದ ಕಾರಣ ಕಡಿಮೆಯಲ್ಲಿ ಚಿನ್ನ ಕೊಡ್ತೇವೆ … ಹೀಗಂತ ಯಾರಾದರೂ ನಿಮ್ಮ ಬಳಿ ಬಂದು ಹೇಳಿದ್ರೆ ಎಚ್ಚರವಾಗಿರಿ.

    ಯಾಕಂದ್ರೆ ಇಂತಹ ಕಥೆ ಹೇಳಿ ನಕಲಿ ಚಿನ್ನ ನೀಡಿ ವಂಚಿಸುವ ತಂಡವೊಂದು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ. ನಗರದ ನಾಗುರಿ ಬಳಿ ಇದೇ ಕಥೆ ಹೇಳಿಕೊಂಡು ಅಂಗಡಿಯವರೊಬ್ಬರನ್ನು ವಂಚಿಸಲು ಪ್ರಯತ್ನಿಸಿದ್ದಾರೆ.

    ಮಹಿಳೆ ಹಾಗೂ ನಾಲ್ವರು ಯುವಕರ ತಂಡ ಈ ಪ್ರಯತ್ನ ಮಾಡಿ ತಗಲಾಕೊಂಡಿದ್ದಾರೆ. ಮೊದಲಿಗೆ ಅಸಲಿ ಚಿನ್ನ ನೀಡಿ ಪರೀಕ್ಷಿಸಲು ಹೇಳಿದ್ದು ಪರೀಕ್ಷೆ ವೇಳೆ ಅದು ಅಸಲಿಯೇ ಆಗಿತ್ತು. 2 ಲಕ್ಷಕ್ಕೆ ಮತ್ತೊಂದು ಚಿನ್ನ ನೀಡಿದ್ದು ಅದು ನಕಲಿಯಾಗಿತ್ತು.

    ಇದನ್ನೂ ಓದಿ: 23 ವರ್ಷದ ಹಿಂದಿ ಕಿರುತೆರೆ ನಟ ಸಾವು

    ಆದರೆ ಇಂತಹ ವಂಚನೆ ಬಗ್ಗೆ ಮೊದಲೇ ಅನುಮಾನ ಇದ್ದ ಅಂಗಡಿಯವರು ಈ ಚಿನ್ನ ಕೂಡಾ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಈ ವೇಳೆ ಬಂಡವಾಳ ಬಯಲಾಗುತ್ತದೆ ಎಂದು ನಾಲ್ವರು ಯುವಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆದರೆ ಜೊತೆಯಲ್ಲಿದ್ದ ಮಹಿಳೆಯನ್ನು ಅಂಗಡಿಯವರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಕಡಿಮೆ ಬೆಲೆಗೆ ಇಂತಹ ಮೋಸದ ಕಥೆ ಹೆಣೆದು ಚಿನ್ನದ ಆಸೆ ತೋರಿಸಿ ವಂಚಿಸೋ ದೊಡ್ಡ ತಂಡವೇ ಇಲ್ಲಿ ಕಾರ್ಯಾಚರಿಸ್ತಾ ಇದೆ. ಹೀಗಾಗಿ ಸಾರ್ವಜನಿಕರು ಇಂತವರ ಬಗ್ಗೆ ಎಚ್ಚರವಾಗಿರುವುದು ಒಳ್ಳೆಯದು.

     

    Continue Reading

    FILM

    23 ವರ್ಷದ ಹಿಂದಿ ಕಿರುತೆರೆ ನಟ ಸಾವು

    Published

    on

    ಮಂಗಳೂರು/ಮುಂಬೈ : ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
    ಟ್ರಕ್ ಚಾಲಕನ ವಿರುದ್ದ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಕುಂದಾಪುರ : ಕಾರು ಡಿ*ಕ್ಕಿ; ಮಹಿಳೆಗೆ ಗಂಭೀ*ರ ಗಾ*ಯ

    ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಜೈಸ್ವಾಲ್ ಅವರು ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದರು.

    ‘ಹೊಸ ಕನಸುಗಳು ಮತ್ತು ಅಂತ್ಯವಿಲ್ಲದ ಸಾಧ್ಯತೆಗಳೊಂದಿಗೆ 2025ಕ್ಕೆ ಕಾಲಿಡುತ್ತಿದ್ದೇನೆ’ ಎಂದು ಜೈಸ್ವಾಲ್ ಅವರು ಹೊಸ ವರ್ಷದ ಪ್ರಯುಕ್ತ ಇನ್‌ಸ್ಟಾಗ್ರಾಮ್‌ನಲ್ಲಿ ಕೊನೆಯದಾಗಿ ಹಂಚಿಕೊಂಡಿದ್ದ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

    Continue Reading

    LATEST NEWS

    Trending