ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.
ಕಿನ್ನಿಗೋಳಿ: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ ಹಿಲಾಲ್(16 )ಮೃತ ಬಾಲಕನಾಗಿದ್ದಾನೆ.
ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು.
ಹಾಗಾಗಿ ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಹಿಲಾಲ್ ಸುರತ್ಕಲ್ ನ ಗೈಡ್ ಲೈನ್ ಟುಟೋರಿಯಲ್ಸ್ 10ನೇ ತರಗತಿ ವಿದ್ಯಾರ್ಥಿಯಾಗಿದ್ದು,
ಪಕ್ಷಿಕೆರೆ ಅಲ್ ಬದ್ರಿಯಾ ಮದರಸದ ವಿದ್ಯಾರ್ಥಿ. ಇವರು ಎಸ್ಎಸ್ಎಫ್ ಪಕ್ಷಿಕೆರೆ ಘಟಕದ ಸದಸ್ಯ ಎಂದು ತಿಳಿದು ಬಂದಿದೆ. ಮೃತ ಹಿಲಾಲ್ ತಂದೆ ಇಸ್ಮಾಯೀಲ್, ತಾಯಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.