ತನ್ನ ಹುಟ್ಟುಹಬ್ಬದ ದಿನದಂದೇ 16 ವರ್ಷದ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತದೇಹದ ಜತೆಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.
ಹೈದ್ರಾಬಾದ್ : ತನ್ನ ಹುಟ್ಟುಹಬ್ಬದ ದಿನದಂದೇ 16 ವರ್ಷದ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತದೇಹದ ಜತೆಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.
ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಿ.ಎಚ್.ಸಚಿನ್ (16) ಮೃತ ಯುವಕನಾಗಿದ್ದಾನೆ .
ಆಸಿಫಾಬಾದ್ ಮಂಡಲದ ಬಾಬಾಪುರ ಗ್ರಾಮದ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಜಮಾಯಿಸಿದ್ದರು.
ಮನೆಯವರು ಮಗನಿಗಾಗಿ ದೊಡ್ಡ ಸಂಭ್ರಮಾಚರಣೆಯನ್ನು ಸಿದ್ಧಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನಡುವೆಯೇ ಸಚಿನ್ ಏಕಾಏಕಿ ಕುಸಿದು ಬಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು.
ಹೃದಯಾಘಾತದಿಂದ ಸಚಿನ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಮಗನ ಪಾರ್ಥಿವ ಶರೀರದ ಜೊತೆಗೆ ಅವರ ಹುಟ್ಟುಹಬ್ಬವನ್ನು ಆಚರಿಸಲು ಕುಟುಂಬಸ್ಥರು ನಿರ್ಧರಿಸಿದರು.
ಮೃತದೇಹದ ಜತೆಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯಸಂಸ್ಕಾರ ಮಾಡಲಾಯಿತು.