ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್ ಜೆಟ್ ವಿಮಾನದಲ್ಲಿ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ 24 ಕ್ಯಾರೆಟ್‌ನ 332 ಗ್ರಾಂ ಚಿನ್ನವನ್ನು ತಾನು ಧರಿಸಿದ್ದ ಚಪ್ಪಲಿಯಡಿಯಲ್ಲಿ ಪೇಸ್ಟ್ ರೂಪದಲ್ಲಿ ಸಾಗಿಸುತ್ತಿದ್ದ,
ತಕ್ಷಣ ಎಚ್ಚೆತ್ತ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನದ ಮೌಲ್ಯ 17, 43,000 ರೂ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.