chikkamagaluru
ಬಿರಿಯಾನಿ ಸೇವಿಸಿ 17 ಜನ ಗಾಮಸ್ಥರು ಅಸ್ವಸ್ಥ..!
ಚಿಕ್ಕಮಗಳೂರು: ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದು 17 ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮರವಂಜಿ ಗ್ರಾಮದ ಮನೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು ಸೇವಿಸಿದ್ದಾರೆ. ಸೇವಿಸಿದ ಸ್ವಲ್ಪ ಹೊತ್ತಿನ ಬಳಿಕ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡ ಹಿನ್ನೆಲೆ ಗ್ರಾಮಸ್ಥರು ಅಂಬುಲೆನ್ಸ್‌ನಲ್ಲಿ ಎಲ್ಲರನ್ನೂ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾನುವಾರ ತಯಾರಿಸಿದ್ದ ಮಾಂಸಾಹಾರ ಸೋಮವಾರ ವಿಷಪೂರಿತಗೊಂಡಿದ್ದು, ಅದನ್ನೇ ಗ್ರಾಮಸ್ಥರು ಸೇವಿಸಿದ್ದರಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಯಾರ ಪ್ರಾಣಕ್ಕೂ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಗ್ರಾಮಸ್ಥರ ಪೈಕಿ 8 ಪುರುಷರು ಹಾಗೂ 9 ಮಹಿಳೆಯರು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿದು ಕಡೂರು ಶಾಸಕ ಕೆಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಯೋಗಕ್ಷೇಮ ವಿಚಾರಿಸಿದ್ದಾರೆ.
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!