ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 18 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.
ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 18 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ಕೂಡಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ದೇವೇಂದ್ರ ಪಾಟ್ ಫೋಡೆ ಅವರು, ಈ ವರೆಗೂ 18 ದೇಹಗಳನ್ನು ಹೊರತೆಗೆಯಲಾಗಿದೆ.
ಈ ಪೈಕಿ 15 ಮಂದಿ ಮಹಿಳೆಯರು ಇಬ್ಬರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.
ಬೆಂಕಿ ನಂದಿಸವ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.ಮೂಲಗಳ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 37 ಮಂದಿ ಕಾರ್ಮಿಕರು ಇದ್ದರು. ಈ ಪೈಕಿ 20 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ ಅವರು ದುರ್ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50, 000 ಪರಿಹಾರ ಘೋಷಣೆ ಮಾಡಿದ್ದಾರೆ,