Connect with us

LATEST NEWS

11 ತಿಂಗಳಲ್ಲಿ ಕಳವಾದ 18 ಮೊಬೈಲ್‌ ಫೋನ್‌ ವಾರಸುದಾರರಿಗೆ ಹಸ್ತಾಂತರ

Published

on

ಉಡುಪಿ: ಮಣಿಪಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023 ಜನವರಿಯಿಂದ ಇದುವರೆಗಿನ 11 ತಿಂಗಳ ಅವಧಿಯಲ್ಲಿ ವಿವಿಧ ವ್ಯಕ್ತಿಗಳಿಂದ ಕಳವಾದ 3.5 ಲಕ್ಷ ರೂಪಾಯಿ ಮೌಲ್ಯದ 18 ಮೊಬೈಲ್‌ ಫೋನ್‌ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅವುಗಳನ್ನು ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರಿಗೆ ಉಡುಪಿ ಜಿಲ್ಲಾ ಅಡೀಶನಲ್‌ ಎಸ್.ಪಿ. ಸಿದ್ಧಲಿಂಗಪ್ಪ ಟಿ. ಅವರು ಮಣಿಪಾಲ ಠಾಣೆಯಲ್ಲಿ ಹಸ್ತಾಂತರಿಸಿದರು.

ಮಣಿಪಾಲ ಸಮೀಪದ ಈಶ್ವರ ನಗರದ ದಿಯಾಂಜಲಿ ಎಂಬವರು ಕಳೆದ ನ. 5 ರಂದು ತನ್ನ 15 ಸಾವಿರ ರೂಪಾಯಿ ಮೌಲ್ಯದ ವನ್‌ ಪ್ಲಸ್‌ 7 ಮೊಬೈಲ್‌ ಹಾಗೂ ನವೆಂಬರ್‌ 27 ರಂದು ತನ್ನ ಸ್ನೇಹಿತೆಯ 20 ಸಾವಿರ ರೂಪಾಯಿ ಮೌಲ್ಯದ ರೆಡ್‌ ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಮೊಬೈಲ್‌ ಫೋನ್‌ ಕಳವಾದ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಗೆ ಡಿ. 16 ರಂದು ದೂರು ನೀಡಿದ್ದರು. ಈ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಂಡ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ನೇತೃತ್ವದ ಪೊಲೀಸರು ಕಳವಾದ ಮೊಬೈಲ್‌ ಫೋನ್‌ಗಳ ಬಗ್ಗೆ ಸಿಇಐಆರ್‌ ಪೋರ್ಟಲ್‌ ನಲ್ಲಿ ನಮೂದಿಸಿದ್ದರು. ಸಿಇಐಆರ್‌ ಪೋರ್ಟಲ್‌ ಪರಿಶೀಲಿಸಿದಾಗ ಕಳವಾದ ಮೊಬೈಲ್‌ ಫೋನ್‌ ಗಳನ್ನು ಆರೂರು ಗ್ರಾಮದ ದೀಕ್ಷಿತ್‌ (27) ಎಂಬಾತ ಬಳಕೆ ಮಾಡುತ್ತಿರುವುದು ಕಂಡು ಬಂದಿತ್ತು. ಪೊಲೀಸರು ಆತನನ್ನು ಬಂಧಿಸಿದ್ದು, ಬಳಿಕ ಆತ ಬೇರೆ ಬೇರೆ ಕಡೆಗಳಲ್ಲಿ ಕಳವು ಮಾಡಿದ 6 ಮೊಬೈಲ್‌ ಫೋನ್‌ಗಳನ್ನು ವಶ ಪಡಿಸಿಕೊಂಡಿದ್ದರು. ಆತನನ್ನು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈ 6 ಮೊಬೈಲ್‌ ಫೋನ್‌ಗಳನ್ನು ಮತ್ತು ಪೊಲೀಸರು ಈ ಹಿಂದೆ ವಿವಿಧ ಕಳವು ಪ್ರಕರಣಗಳಲ್ಲಿ ಪತ್ತೆ ಹಚ್ಚಿದ್ದ 12 ಮೊಬೈಲ್‌ ಸೇರಿದಂತೆ ಒಟ್ಟು 18 ಮೊಬೈಲ್‌ ಫೋನ್‌ ಗಳನ್ನು ನಿನ್ನೆ ಉಡುಪಿ ಜಿಲ್ಲಾ ಅಡೀಶನಲ್‌ ಎಸ್.ಪಿ. ಸಿದ್ಧಲಿಂಗಪ್ಪ ಟಿ. ಅವರು ಮಣಿಪಾಲ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ಕಳೆದುಕೊಂಡ ಮೊಬೈಲ್‌ ಫೋನ್‌ ಬಗ್ಗೆ ಸೆಂಟ್ರಲ್‌ ಎಕ್ವಿಪ್‌ ಮೆಂಟ್‌ ಐಡೆಂಟಿಟಿ ರಿಜಿಸ್ಟ್ರಾರ್‌ – ಸಿಇಐಆರ್‌ ಪೋರ್ಟಲ್‌ ನಲ್ಲಿ ನಮೂದಿಸಿದ್ದಲ್ಲಿ ಪೊಲೀಸರಿಗೆ ಪತ್ತೆ ಮಾಡಲು ಅನುಕೂಲವಾಗುತ್ತದೆ ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

LATEST NEWS

ಮಾಜಿ ಸಿಎಂ ಎಸ್.ಎಂ. ಕೃಷ್ಣರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ!

Published

on

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ(91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದ ಅವರು ಡಿಸ್ಚಾರ್ಜ್ ಆಗಿದ್ದರು.
ಮತ್ತೆ ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿ:ಪ್ರತಿ ಮಹಿಳೆಗೆ ಸಿಗುತ್ತೆ 3 ಲಕ್ಷ ರೂಪಾಯಿ..! ಈ ಹಣ ಸಿಗಲು ಹೀಗೆ ಮಾಡಿ ಸಾಕು!

ಆಸ್ಪತ್ರೆ ಪ್ರಕಟಣೆ :

ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Continue Reading

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

LATEST NEWS

Trending