Connect with us

    LATEST NEWS

    ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿ 19 ದಿನ: ಮುಂದೇನು?

    Published

    on

    ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ.

    ಈ ಘಟನೆ ನಡೆದ ನಂತರದಲ್ಲಿ ಪೊಲೀಸರ ಪ್ರತಿಯೊಂದು ನಡೆ ಅನುಮಾನಾಸ್ಪದವಾಗಿದೆ ಎಂದು ಇಲಾಖೆಯ ಸಿಬ್ಬಂದಿಯೇ ದೂರುತ್ತಿದ್ದು, ಬಡವನಿಗೊಂದು ನ್ಯಾಯ ದುಡ್ಡಿದ್ದವರಿಗೊಂದು ನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

    ಪ್ರಮುಖ ಆರೋಪಿಯನ್ನು ಬಿಟ್ಟು ಉಳಿದವರನ್ನು ವಶಕ್ಕೆ ಪಡೆದು, ಅಮಾನತು ಮಾಡಿ ಪೊಲೀಸ್‌ ಇಲಾಖೆ ಕೈತೊಳೆದುಕೊಂಡಿದೆ ಎನ್ನುವುದು ಸಾರ್ವಜನಿಕರ ಆರೋಪ. ಪ್ರಕರಣ ಸುದ್ದಿಯಾದಾಗಿನಿಂದ ಏನೆಲ್ಲಾ ಘಟನಾವಳಿ ನಡೆದಿದೆ ಎಂಬ ಪಿನ್‌ ಟು ಪಿನ್‌ ವರದಿ ಇಲ್ಲಿದೆ.
    ಘಟನಾವಳಿ ವಿವರ
    ನಗರದ ಕಾನೂನು ಕಾಲೇಜಿನಲ್ಲಿ ಕಲಿಯುತ್ತಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿ ಆ.8ರಂದು ನ್ಯಾಯವಾದಿ ಕೆ.ಎಸ್‌.ಎನ್‌ ರಾಜೇಶ್‌ ಅವರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.
    ಸೆ.25ರಂದು ರಾಜೇಶ್‌ ಭಟ್‌ ಆತನ ಚೇಂಬರ್‌ ಒಳಗೆ ಈ ಯುವತಿಯನ್ನು ಕರೆದು ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ಈ ಮೊದಲು ಸಹ ಆಕೆ ಕೆಲಸ ಮಾಡುತ್ತಿರುವ ವೇಳೆ ಸಿಸಿಟಿವಿಯ ಮೂಲಕ ಪೋಟೋ ತೆಗೆದು ಆ ಫೋಟೋವನ್ನು ಆಕೆಗೆ ವಾಟ್ಸಪ್‌ ಮೂಲಕ ಕಳುಹಿಸಿ ಅಸಭ್ಯ ಮೇಸೆಜ್‌ ಮಾಡುತ್ತಿದ್ದನು.
    ಅ.18ರಂದು ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ.

    ಘಟನೆ ನಡೆದ ಎರಡು ದಿನದೊಳಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಆರೋಪಿಯ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿ ಬರುತ್ತಾರೆ.
    ಅ.22ರಂದು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್​​ ಹಾಗೂ ಬಾರ್ ಅಸೋಸಿಯೇಷನ್​​ನಿಂದ ರಾಜೇಶ್ ಭಟ್ ಅಮಾನತು ಆಗುತ್ತಾನೆ.
    ಅ.27ರಂದು ರಾಜೇಶ್‌ ಭಟ್‌ಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಬೋಂದೆಲ್‌ ನಿವಾಸಿ ಅನಂತ ಭಟ್‌ ಎಂಬುವವನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ. ಈತ ರಾಜೇಶ್‌ ಭಟ್‌ ಅನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಟ್ಟಿದ್ದಾನೆ ಎಂಬ ಆರೋಪದಲ್ಲಿ ಈತನ ಬಂಧನವಾಗುತ್ತದೆ.
    ಅ.29ರಂದು ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳ್ಳುತ್ತದೆ.


    ಅದಾದ ಮರುದಿನ ಅಂದರೆ ಅ.30ರಂದು ನಗರದ ಕ್ಲಾಕ್‌ ಟವರ್‌ ಮುಂದೆ ಸರ್ವಕಾಲೇಜು ವಿದ್ಯಾರ್ಥಿ ಸಂಘ ಜೊತೆ ಹಲವು ಸಾಮಾಜಿಕ ಹೋರಾಟಗಾರರು ಸೇರಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸುತ್ತಾರೆ. ಅದರಲ್ಲೂ ಸಂತ್ರಸ್ತೆಯೇ ಪ್ರತಿಭಟನೆಯಲ್ಲಿ ಭಾಗಿಯಾಗಿ ಆರೋಪಿ ಬಂಧನಕ್ಕೆ ಆಗ್ರಹಿಸುತ್ತಾಳೆ.
    ನ.2ರಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಪೊಲೀಸ್‌ ಕಮೀಷನರ್‌, ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಆರೋಪದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಮಂಗಳೂರು ದಕ್ಷಿಣ ವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ನೇತೃತ್ವದಲ್ಲಿ 4 ಪೊಲೀಸ್‌ ತಂಡ ರಚಿಸಲಾಗಿದೆ.

    ಆರೋಪಿ ಪದೇ ಪದೇ ವಾಸ್ತವ್ಯ ಬದಲಾಯಿಸುತ್ತಿದ್ದಾನೆ ಎಂದು ಹೇಳಿಕೆ ನೀಡುತ್ತಾರೆ. ಈ ಪ್ರಕರಣದಲ್ಲಿ ಪವಿತ್ರಾ ಆಚಾರ್ಯ, ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಹಾಗೂ ಅನಂತ ಭಟ್‌ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರುತ್ತಾರೆ.
    ಈ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
    ಇಷ್ಟೆಲ್ಲಾ ಬೆಳವಣಿಗೆಗಳು ಆಗಿ 19 ದಿನಗಳು ಕಳೆದಿವೆ. ಪ್ರಕರಣ ದಾಖಲಾದ ದಿನದಿಂದ ಆರೋಪಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ತನಕ ಬಂಧಿಸದೇ ಆತ ಪರಾರಿಯಾಗಲು ಪೊಲೀಸರೇ ಸಹಕರಿಸಿದ್ದಾರೆ ಎಂಬ ಆರೋಪವನ್ನು ಪ್ರತಿಭಟನಾ ನಿರತರೇ ಮಾಡಿದ್ದಾರೆ.

    ಅದಾಗಿ ಜಾಮೀನು ಅರ್ಜಿ ವಜಾ ಆಗಿ 8 ದಿನಗಳು ಕಳೆದರೂ ಪೊಲೀಸರು 4 ತಂಡ ಮಾಡಿ ಯಾರನ್ನು ಹುಡುಕುತ್ತಿದ್ದಾರೆ ಎಂಬುವುದೇ ಇದುವರೆಗೂ ಸ್ಪಷ್ಟವಾಗಿಲ್ಲ ಎಂದು ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
    ಅ.30ರಂದು ಪ್ರತಿಭಟನೆ ನಡೆಸಲು ಅನುಮತಿಗಾಗಿ ಪೊಲೀಸರ ಬಳಿ ಹೋದಾಗ ಗಂಟೆಗಟ್ಟಲೆ ಅಲೆದಾಡಿಸಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ವಿದ್ಯಾರ್ಥಿ ಆರೋಪಿಸಿದ್ದಾರೆ.
    ಮಂಗಳೂರು ನಗರಕ್ಕೆ ಎನ್‌.ಶಶಿಕುಮಾರ್‌ ಪೊಲೀಸ್‌ ಆಯುಕ್ತರಾಗಿ ಬಂದಾಗಿನಿಂದ ಸಣ್ಣಪುಟ್ಟ ಪ್ರಕರಣಗಳನ್ನು ಬೇಧಿಸಿ ಸಾಮಾಜಿಕ ಜಾಲತಾಣದ ಹೀರೋ, ಮಂಗಳೂರಿನ ಸೂಪರ್‌ ಕಾಪ್‌ ಅನಿಸಿಕೊಂಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಪೊಲೀಸ್‌ ಕಮೀಷನರದ್ದು ಜಾಣ ನಡೆ ಅನ್ನುತ್ತಿದ್ದಾರೆ ಸ್ವತಃ ಪೊಲೀಸ್‌ ಮೂಲಗಳು.
    ಸದ್ಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಅದಾದ ಬಳಿಕ ಸಮಾನ ಮನಸ್ಕ ಸಂಘಟನೆ ಜೊತೆಗೂಡಿ ಶೀಘ್ರದಲ್ಲಿಯೇ ಉಪವಾಸ ಸತ್ಯಾಗ್ರಹದೊಂದಿಗೆ ಹೈಕೋರ್ಟ್‌ ಕದ ತಟ್ಟಲು ಸಿದ್ದತೆ ನಡೆಸಲಾಗಿದೆ.
    ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ಇದಕ್ಕೆ ಅನುಮತಿ ನೀಡುವುದಿಲ್ಲ ಎಂಬುವುದು ನಮಗೆ ಗೊತ್ತಿದೆ. ಆದರೆ ಅನುಮತಿ ನೀಡದಿದ್ದರೂ ನಾವು ಉಪವಾಸ ನಡೆಸಿಯೇ ತೀರುತ್ತೇವೆ ಎಂದು ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿದ್ದಾರೆ.
    ‘ಪ್ರತಿಯೊಂದು ವಿಷಯದಲ್ಲಿ ಜವಾಬ್ದಾರಿ ತೆಗೆದುಕೊಳ್ಳುವ ಕಮೀಷನರ್‌ ಇಂತಹ ಸೂಕ್ಷ್ಮ ಪ್ರಕರಣದಲ್ಲಿ ಜವಾಬ್ದಾರಿ ತೆಗೆದುಕೊಳ್ಳದೆ ತಂಡ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಆ ತಂಡ ಈ ತನಕ ಏನು ಮಾಡಿದೆ? ಸಾಮಾಜಿಕ ಕಾರ್ಯಕರ್ತೆ, ಪ್ರಸನ್ನ ರವಿ ಪ್ರಶ್ನಿಸಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending