ನವದೆಹಲಿ: 1988ರ ರಸ್ತೆ ಅಪಘಾತ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ, ತೀರ್ಪು ವಿಧಿಸಿದೆ.
1988ರಲ್ಲಿ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ದಾಂಧಲೆ ನಡೆಸಿ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು.
ಈ ಪ್ರಕರಣದಲ್ಲಿ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ, ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.
ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಆದರೆ, ಇದೀಗ ಪರಿಷ್ಕೃತ ತೀರ್ಪು ಹೊರಹಾಕಿದ್ದು, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಪಂಜಾಬ್ ಪೊಲೀಸರು ನವಜೋತ್ ಸಿಂಗ್ ಸಿಧು ಅವರನ್ನ ವಶಕ್ಕೆ ಪಡೆದುಕೊಳ್ಳಲಿದ್ದಾರೆ.