Sunday, November 27, 2022

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.


ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ ಹೆಚ್ಚಾಗತೊಡಗಿದೆ. ಕರಾವಳಿ ಮೊಬೈಲ್ ಅಂಗಡಿಯಲ್ಲಿ ಕಳವು ನಡೆದಿದ್ದು, ಕಳ್ಳನ ಕೃತ್ಯ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಅಂಗಡಿಯ ಶಟರ್‌ ಲಾಕ್ ಒಡೆದು ರೈನ್ ಕೋಟ್ ಧರಿಸಿ ಒಳ ಪ್ರವೇಶಿಸಿದ್ದ ಕಳ್ಳ, 7 ಮೊಬೈಲ್, ಹೆಡ್‌ಫೋನ್, ಬ್ಲೂಟೂತ್ ಹಾಗೂ 10 ಸಾವಿರ ನಗದು ಕಳವುಗೈದಿದ್ದಾನೆ.


ಕಳವಾದ ಸೊತ್ತಿನ ಒಟ್ಟು ಅಂದಾಜು ಮೌಲ್ಯ 1 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...