Monday, May 23, 2022

ಕಾರ್ಕಳ: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ವ್ಯಕ್ತಿಯ ಅಪಹರಣ ಹಾಗೂ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಗಳನ್ನು ಹೊಳೆನರಸೀಪುರದಲ್ಲಿ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಯೋಗಿಶ, ಮಂಜುನಾಥ್, ವಸಂತ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ
2007ರ ಅ.14 ರಂದು ಆರೋಪಿಗಳು ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು ಪೋಸ್ಟ್ ಆಫೀಸ್ ಬಳಿ ಕುಕ್ಕುಂದೂರು ಗ್ರಾಮದ ವೆಂಕಟೇಶ್ ಎಂಬವರನ್ನು ಅಪಹರಿಸಿ ಕೊಂಡು ಹೋಗಿ ಆರೋಪಿ ಯೋಗೀಶನ ಮನೆಯಲ್ಲಿ ಅಕ್ರಮ ಬಂಧನದಲ್ಲಿಟ್ಟಿದ್ದರು.
ಮಾತ್ರವಲ್ಲದೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಯೋಗೀಶನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಡಿಸಿದ್ದರು.

ಉಳಿದ ಆರೋಪಿಗಳಾದ ಮಂಜುನಾಥ ಮತ್ತು ವಸಂತ ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದು, ಪ್ರಕರಣದ ಆರೋಪಿಗಳ ಬಂಧನಕ್ಕೆ ನ್ಯಾಯಾಲಯವು ಎಲ್ ಪಿಸಿ ವಾರಂಟ್ ಹೊರಡಿಸಿತ್ತು.
ಈ ನಡುವೆ ಆರೋಪಿಗಳು ಹೊಳೆನರಸೀಪುರದಲ್ಲಿವರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾರ್ಕಳ ಉಪ-ವಿಭಾಗದ ಡಿ ವೈಎಸ್ಪಿ ವಿಜಯಪ್ರಸಾದ್,

ಕಾರ್ಕಳ ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್ ಐ ಮಧು ಬಿ ಇ ರವರ ಆದೇಶದಂತೆ ಠಾಣಾ ಎ ಎಸ್ ಐ ರಾಜೇಶ್ ಪಿ,

ಪ್ರೋಬೇಶನರಿ ಪಿ ಎಸ್ ಐ ಮಹೇಶ್ ಕಂಬಿ, ಪಿ ಸಿ ಘನಶ್ಯಾಮ್ ಅವಯ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...