Saturday, August 20, 2022

ಬಂಟ್ವಾಳದಲ್ಲಿ ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವನ ಸ್ಥಿತಿ ಚಿಂತಾಜನಕ

ಬಂಟ್ವಾಳ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಖಾಸಗಿ‌ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ನಯನಾಡು ನಿವಾಸಿ ಹಾಗೂ ಚಾಲಕ ರಾಕ್ ಲಿನ್ ಲೋಬೊ (26) ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಂಗಳೂರಿನಿಂದ ಪೂಂಜಾಲಕಟ್ಟೆಗೆ ತೆರಳುತ್ತಿದ್ದ ರಿಟ್ಸ್‌ ಕಾರು ಹಾಗೂ ವಾಮದಪದವು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರಿನ ಮಧ್ಯೆ ನಾವೂರಿನ ಬಡಗುಂಡಿಯಲ್ಲಿ ಅಪಘಾತ ಸಂಭವಿಸಿದೆ.

ರಿಟ್ಸ್‌ ಕಾರಿನಲ್ಲಿದ್ದ ಚಾಲಕ ರಾಕ್ ಲಿನ್ ಲೋಬೊ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಹಾಗೂ ಎರ್ಟಿಗಾ ಕಾರಿನಲ್ಲಿ ಸುಮಾರು 12 ಮಂದಿ ಪ್ರಯಾಣಿಕರಿದ್ದರು. ಎಲ್ಲರಿಗೂ ಗಾಯವಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics