Wednesday, December 1, 2021

ಜೋಕಾಲಿ ಕೊರಳಿಗೆ ಸಿಕ್ಕಿ ಇಬ್ಬರು ಮಕ್ಕಳ ದುರ್ಮರಣ

ಸೋಮವಾರಪೇಟೆ: ಸೀರೆ ಬಳಸಿ ಜೋಕಾಲಿ ಆಡುತ್ತಿದ್ದ ಇಬ್ಬರು ಮಕ್ಕಳು ಅದೇ ಜೋಕಾಲಿಯಿಂದ ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ಸೋಮವಾರಪೇಟೆ ಪಟ್ಟಣ ಸಮೀಪದ ಗಣಗೂರು ಉಂಜಿಗನ ಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಗ್ರಾಮದ ನಿವಾಸಿ ಕಾರ್ಮಿಕ ರಾಜು ಹಾಗೂ ಜಯಂತಿ ಎಂಬವರ ಪುತ್ರಿ ಮಣಿಕ್ ಶಾ(14) ಹಾಗೂ ಪೂರ್ಣೆಶ್ (12) ಮೃತ ಮಕ್ಕಳು. ಸಂಜೆ ಮನೆಯಲ್ಲಿ ಇವರು ಇಬ್ಬರೇ ಇದ್ದರು, ಈ ವೇಳೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಜೋಕಾಲಿ ಕೊರಳಿಗೆ ಉರುಳಾಗಿ ಸುತ್ತಿಕೊಂಡ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲಸಕ್ಕೆ ತೆರಳಿದ್ದ ತಾತ ರಾಮಣ್ಣ ಮನೆಗೆ ಬಂದು ನೋಡಿದಾಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತಕ್ಷಣವೇ ಸೀರೆಯನ್ನು ಕತ್ತರಿಸಿ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಆದರೆ ಆ ವೇಳೆಗೆ ಇಬ್ಬರೂ ಮೃತಪಟ್ಟಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಸಬ್ ಇನ್‍ಸ್ಪೆಕ್ಟರ್ ಶ್ರೀಧರ್ ಹಾಗೂ ಸಿಬ್ಬಂದಿ ತೆರಳಿ ಪ್ರಕರಣ ದಾಖಲಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...