Homebangaloreಸರ್ಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ

ಸರ್ಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ

ಬೆಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.


ಇದಕ್ಕೆ ತಕ್ಷಣ ಸ್ಪಂದಿಸಿದ ಸಿಎಂ ಬೊಮ್ಮಾಯಿ 2 ಕೋಟಿ ರೂಪಾಯಿ ಮಂಜೂರಾತಿಗೆ ಅನುಮತಿ ನೀಡಿದರು.

ಈ ಸಂದರ್ಭ ಸಮಿತಿ ಸಂಚಾಲಕ ಮತ್ಸ್ಯರಾಜ್ ಉಮೇಶ್ ಟಿ.ಕರ್ಕೇರ, ಪ್ರ.ಕಾ ಗಣೇಶ್ ಹೊಸಬೆಟ್ಟು, ಕೃಷ್ಣಶೆಟ್ಟಿ, ಪುರುಷೋತ್ತಮ್ ಎನ್.ಆರ್ ಮತ್ತಿತರ ಪದಾಧಿಕಾರಿಗಳು ನಿಯೋಗದಲ್ಲಿದ್ದರು.

ಸರಕಾರದಿಂದ ಅನುದಾನ ಒದಗಿಸಿದ ಮುಖ್ಯಮಂತ್ರಿಗಳಿಗೆ, ಸಂಸದರಿಗೆ, ಶಾಸಕರಿಗೆ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಕೃತಜ್ಞತೆ ಅರ್ಪಿಸಲಾಯಿತು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...