Connect with us

    DAKSHINA KANNADA

    ಮಂಗಳೂರು: ಅಂತರ್‌ಜಿಲ್ಲಾ ದನಗಳ್ಳರ ಬಂಧನ- ಓರ್ವ ಎಸ್ಕೇಪ್‌

    Published

    on

    ಮಂಗಳೂರು: ದ.ಕ.& ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ದನಗಳನ್ನು ಕಳವು ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಓರ್ವ ಪರಾರಿಯಾಗಿದ್ದಾನೆ.

    ಪೊಲೀಸರು ವಶಪಡಿಸಿಕೊಂಡ ಕಾರು ಹಾಗೂ ಬಂಧಿತ ಆರೋಪಿಗಳು

    ಆರೋಪಿಗಳನ್ನು ಇರ್ಷಾದ್‌ ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್‌ ಯಾನೆ ಮಲಾರ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಪರಾರಿಯಾದವರನ್ನು ಮದಡ್ಕ ಫಾರೂಕ್‌ ಎಂದು ಗುರುತಿಸಲಾಗಿದೆ.
    ಘಟನೆ ವಿವರ
    ಇಂದು ಬೆಳಗ್ಗೆ ಬಜಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಪ್ರಕಾಶ್‌ ಅವರ ಆದೇಶದಂತೆ ಎಸ್‌ಐ ಪೂವಪ್ಪ ಅವರು ಸಿಬ್ಬಂದಿ ಜತೆ ಅಡ್ಕೂರು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಆರೋಪಿಗಳು ದನ ಕಳವು ಮಾಡಲು ಉಪಯೋಗಿಸುತ್ತಿದ್ದ ಕೆಎ 01 ಎಬಿ 0832 ನೋಂದಣಿಯ ಕಾರು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಆರೋಪಿತರನ್ನು ತೀವ್ರ ವಿಚಾರಣೆ ನಡೆಸಿದಾಗ ಅವರು ಇತ್ತೀಚೆಗೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮಿತ್ತೂರಿನ 6 ದನಗಳು ಮತ್ತು 2021ನೇ ಇಸವಿಯಲ್ಲಿ ಬಡಗ ಎಡಪದವು ಹಟ್ಟಿಯಿಂದ 2 ದನಗಳನ್ನು ಕಳವು ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ.
    ತಲೆಮರೆಸಿಕೊಂಡಿರುವ ಮದಡ್ಕ ಫಾರೂಕ್‌ಗೆ ಶೋಧ ಮುಂದುವರಿದಿದೆ.

    ಇವರ ವಿರುದ್ಧ ದನಕಳವು, ದರೋಡೆ ಸೇರಿದಂತೆ ಹಲವು ಪ್ರಕರಣಗಳು ಬಜಪೆ, ಕೊಣಾಜೆ, ಕಾವೂರು, ಮೂಡುಬಿದಿರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಬಂಟ್ವಾಳ ನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬನಕಲ್‌, ಬಸವನಹಳ್ಳಿ ಮತ್ತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending