Connect with us

    BANTWAL

    ರಾಜ್ಯದಲ್ಲಿ ಮಳೆಯಬ್ಬರಕ್ಕೆ 2 ಬಲಿ : ಕರಾವಳಿ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ..!

    Published

    on

    ಕರಾವಳಿ ಭಾಗದಲ್ಲಿ ಇಂದು ಬಿರುಗಾಳಿ ಗಂಟೆಗೆ 40-45 ಕಿಲೋ ಮೀಟರ್‌ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

    ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದ್ದು, ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ.  

    ಮುಂದಿನ ಎರಡರಿಂದ ಮೂರು ದಿನಗಳ ಕಾಲ ಇದೇ ರೀತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಜೂನ್ 13 ರ ಇಂದು ಮತ್ತು ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಅಂದರೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

    ಕರಾವಳಿ ಭಾಗದಲ್ಲಿ ಇಂದು ಬಿರುಗಾಳಿ ಗಂಟೆಗೆ 40-45 ಕಿಲೋ ಮೀಟರ್‌ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

    ಉತ್ತರ ಕರ್ನಾಟಕದಲ್ಲೂ ಅಬ್ಬರಿಸಿದ ವರುಣ :
    ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದು ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್ ಗಳಲ್ಲೂ ವ್ಯಾಪಕ ಮಳೆ ಸುರಿದಿದ್ದು ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಕಲಬುರಗಿಯಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾದರೆ, ಇನ್ನೊಂದೆಡೆ ಮರ, ವಿದ್ಯುತ್‌ ಕಂಬಗಳು ಧರೆಗುರುಳಿವೆ.

    ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭಾರಿ ಮಳೆಗೆ ಜನರು ಪರದಾಟ ನಡೆಸುವಂತಾಗಿದೆ. ಶಹಾಪುರದ ಬಸವೇಶ್ವರ ವೃತ್ತ, ತರಕಾರಿ ಮಾರ್ಕೆಟ್ ರಸ್ತೆ ಜಲಾವೃತಗೊಂಡು ರಸ್ತೆ ಬದಿ ವ್ಯಾಪಾರಿಗಳು, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

    ಅಷ್ಟೇ ಅಲ್ಲದೆ, ಶಹಾಪುರ ಪೊಲೀಸ್ ಠಾಣೆಯ ಆವರಣಕ್ಕೂ ಮಳೆ ನೀರು ನುಗ್ಗಿದೆ.

    ಅನೇಕ ಕಡೆ ಮರಗಳು, ವಿದ್ಯುತ್ ಕಂಬಗಳು ರಸ್ತೆ ಮೇಲೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ.

    ರಾಯಚೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದೇವದುರ್ಗ ತಾಲೂಕಿನ ಗೆಜ್ಜೆಬಾವಿದೊಡ್ಡಿ ಗ್ರಾಮದಲ್ಲಿ ಸಿಡಿಲು ಬಡಿದು ಮೌನೇಶ (35) ಎಂಬವರು ಸಾವನ್ನಪ್ಪಿದ್ದಾರೆ.

    ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ನಾಯಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

    ಚಂಡ ಮಾರುತದ ಅಬ್ಬರ ಹೆಚ್ಚಾಗುತ್ತಿರುವುದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ವರುಣನ ಆರ್ಭಟ್‌ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

     

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending