Connect with us

LATEST NEWS

ಕಾರು ಖರೀದಿಗೆ ತೆರಳಿದವರಿಂದ 2 ಲಕ್ಷ ದರೋಡೆ: 8 ಮಂದಿ ಆರೋಪಿಗಳಿಗೆ ಕಠಿಣ ಶಿಕ್ಷೆ

Published

on

ಮಂಗಳೂರು: ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಗೆ ತೆರಳಿದವರಿಂದ 2 ಲಕ್ಷ ರೂ. ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳ ಅಪರಾಧ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅವರಿಗೆ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾತಿ ಅವರು 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಘಟನೆ ವಿವರ

ಮಂಗಳೂರು ಅಶೋಕ ನಗರದ ಚಿದಾನಂದ ಶೆಟ್ಟಿ ಅವರು ಹಳೆ ಇನ್ನೊವಾ ಕಾರು ಖರೀದಿಗೆ ಹುಡುಕಾಡುತ್ತಿದ್ದರು. ಇದನ್ನು ತಿಳಿದ ಕಿಲೆಂಜಾರಿನ ಸುಧೀರ್‌ ಎ೦ಬಾತ ಚಿದಾನಂದ ಶೆಟ್ಟಿ ಅವರಿಗೆ ಕರೆ ಮಾಡಿ ತಾನು ಅವಿನಾಶ್ ಎಂದು ಸುಳ್ಳು ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದ. ನನ್ನ ಚಿಕ್ಕಪ್ಪನ ಹಳೆ ಕಾರು ಮಾರಾಟಕ್ಕಿದ್ದು, ಈ ಬಗ್ಗೆ ಮಾತನಾಡಲು ಸುರತ್ಕಲ್ ಬಳಿ ಬರುವಂತೆ ತಿಳಿಸಿದ್ದ.

ಅದರಂತೆ 2016ರ ಡಿ.23ರಂದು ಚಿದಾನಂದ ಶೆಟ್ಟಿ ಅವರು ಗೆಳೆಯ ಅಶ್ವಿತ್‌ನೊಂದಿಗೆ ಸುರತ್ಕಲ್ ಬಸ್ ನಿಲ್ದಾಣಕ್ಕೆ ತೆರಳಿದರು. ಅಲ್ಲಿಗೆ ಬಂದಿದ್ದ ಸುಧೀರ್ ಸಂಜೆ 6.30ಕ್ಕೆ ಮುಂಗಡ ಹಣ ತೆಗೆದುಕೊಂಡು ಕಾರ್ನಾಡ್ ಜಂಕ್ಷನ್‌ಗೆ ಬರುವಂತೆ ತಿಳಿಸಿದ್ದ. ಅದರಂತೆ 2016ರ ಡಿ.23ರಂದು ಚಿದಾನಂದ ಶೆಟ್ಟಿ ಅವರು ಅಶ್ವಿತ್‌ನೊಂದಿಗೆ ಸುರತ್ಕಲ್‌ ಬಸ್‌ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿ ಬಂದಿದ್ದ ಸುಧೀರ್‌ ಮುಂಗಡ ಹಣ ತೆಗೆದುಕೊಂಡು ಕಾರ್ನಾಡ್‌ ಜಂಕ್ಷನ್‌ಗೆ ಬರುವಂತೆ ತಿಳಿಸಿದ್ದ.

ಚಿದಾನಂದ ಶೆಟ್ಟಿ ಅವರು ಅಶ್ವಿತ್‌ ಮತ್ತು ಭರತ್ ಅವರೊಂದಿಗೆ ಕಾರಿನಲ್ಲಿ 2 ಲಕ್ಷ ರು. ಹಣ ಇಟ್ಟುಕೊಂಡು ಕಾರ್ನಾಡಿಗೆ ತೆರಳಿದ್ದರು. ಅನಂತರ ಸುಧೀರ್‌ನೊಂದಿಗೆ ಮಂಗಳೂರು ತಾಲೂಕು ತಾಳಿಪ್ಪಾಡಿ ಹೊಸಮನೆ ಎಂಬಲ್ಲಿಗೆ ಗುಡ್ಡ ಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಸುಧೀರ್ ಕಾರಿನಿಂದ ಇಳಿದು ಹೋಗಿ ‘ಚಿಕ್ಕಪ್ಪನ ಮನೆ ಇಲ್ಲಿಯೇ ಇದೆ.

ಅವರನ್ನು ಕರೆದುಕೊಂಡು ಬರುತ್ತೇನೆ’ ಎಂದು ತೆರಳಿದ್ದ.
ಅದೇ ಸಮಯಕ್ಕೆ ಒಂದು ಕಾರು, ಸ್ಕೂಟರ್ ಮತ್ತು ಬೈಕ್‌ನಲ್ಲಿ ಆರೋಪಿಗಳಾದ ಕಿಲೆಂಜಾರು ಗ್ರಾಮದ ಶಿವಪ್ರಸಾದ್ ಆಲಿಯಾಸ್ ಅಯ್ಯಪ್ಪ (30), ಸಂದೀಪ್ ಬಿ.ಪೂಜಾರಿ (28), ಕಾರ್ತಿಕ್ ಶೆಟ್ಟಿ (27), ತೆಂಕ ಎರ್ಮಾಳಿನ ವರುಣ್ ಕುಮಾರ್ (26), ಹೆಜಮಾಡಿಯ ಸುವಿನ್ ಕಾಂಚನ್ ಆಲಿಯಾಸ್ ಮುನ್ನ (25),

ಪಡುಪೆರಾರದ ಗೋಪಾಲ ಗೌಡ(39) ಮತ್ತು ಕೊಡೆತ್ತೂರಿನ ಸುಜಿತ್ ಶೆಟ್ಟಿ ಹಾಗೂ ಸುಧೀರ್ ಸೇರಿಕೊಂಡು ತಲವಾರು, ಕಬ್ಬಿಣದ ರಾಡ್, ಕಬ್ಬಿಣದ ಪಂಚ್‌ಗಳೊಂದಿಗೆ ಬಂದು ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿದ್ದ 2 ಲ.ರು. ಹಣವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಅಶ್ವಿತನಿಗೆ ಹಲ್ಲೆ ನಡೆಸಿದ್ದರು. ಅಶ್ವಿತ್ ತಪ್ಪಿಸಿಕೊಂಡಾಗ ಏಟು ಮೊಬೈಲ್‌ಗೆ ಬಿದ್ದಿತ್ತು. ಕಾರಿಗೆ ಹಾನಿಯಾಗಿತ್ತು.
ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ನಾರಾಯಣ ಶೇರಿಗಾರ ವಾದಿಸಿದ್ದರು.

FILM

ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?

Published

on

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್‌ಗೆ ರೆಡಿಯಾಗಿದೆ. ಮಾರ್ಚ್‌ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್‌ ಆಗಿದ್ದು ಹಿಟ್‌ ಲಿಸ್ಟ್‌ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್‌ಗೆ ತಯಾರಾಗಿದೆ.

anjaniputhra

ರಿ ರಿಲೀಸ್ ಯಾವಾಗ?

ಪುನೀತ್‌ ರಾಜ್‌ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್‌ಎಮ್‌ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು.  2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.  ರಾಜ್ಯದ  ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್‌ಎನ್ ಕುಮಾರ್ ತಿಳಿಸಿದ್ದಾರೆ.

ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ ಬರೆದಿದ್ದೇನು..!

ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್‌ ಸಾಂಗ್‌ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending