ದಾವಣಗೆರೆ: ಜಮೀನು ವ್ಯಾಜ್ಯ ಹಿನ್ನೆಲೆ ಎರಡು ಗ್ರಾಮಸ್ಥರು ಕುಡುಗೋಲು, ದೊಣ್ಣೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ಮಧ್ಯೆ ಮಾರಾಮಾರಿ ನಡೆದಿದೆ.
ಹಲ್ಲೆಗೊಳಗಾದವರಿಂದ ಹೊನ್ನಾಳಿ ಠಾಣೆಗೆ ದೂರು ಸಲ್ಲಿಸಲಾಗಿದ್ದು ತುಗ್ಗಲಹಳ್ಳಿಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಿನಿಮೀಯ ರೀತಿಯಲ್ಲಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಪತ್ರೆಗೆ ಹೊನ್ನಾಳಿ ಸಿಪಿಐ ದೇವರಾಜ್ ಭೇಟಿ ನೀಡಿದ್ದಾರೆ. ಹಲ್ಲೆಗೊಳಗಾದವರಿಂದ ಹೊನ್ನಾಳಿ ಠಾಣೆಗೆ ದೂರು ಸಲ್ಲಿಸಲಾಗಿದ್ದು ತುಗ್ಗಲಹಳ್ಳಿಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ