Tuesday, October 19, 2021

ಕಾಂಗ್ರೆಸ್‌ ಸದಸ್ಯೆಯ ಮಾನಭಂಗ ಯತ್ನ ಪ್ರಕರಣ: ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷನಿಗೆ ಜೈಲು

ಸುಳ್ಯ: 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಮೇಲೆ,

ನಡೆಸಲಾದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಸರಸ್ವತಿ ಕಾಮತ್ ಅವರ ಮೇಲೆ ನಡೆಸಲಾದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು, ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ.

2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ಮತ್ತು ಮಾನಭಂಗ ಮಾಡಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಭಾರತೀಯ ದಂಡ ಸಂಹಿತೆ 143 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಕಾರಾಗೃಹ ವಾಸ, ಸೆಕ್ಷನ್ 147 ಜತೆಗೆ 149 ರ. ಅಪರಾಧಕ್ಕೆ 1 ವರ್ಷ ಕಾರಾಗೃಹ ವಾಸ ಮತ್ತು 3 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1ತಿಂಗಳ ಸೆರೆವಾಸ, ಸೆಕ್ಷನ್ 341 ರ ಅಪರಾಧಕ್ಕೆ ಹದಿನೈದು ದಿನಗಳ ಕಾರಾಗೃಹ ವಾಸ ಮತ್ತು 500 ರೂ. ದಂಡ,

ದಂಡ ತೆರಲು ತಪ್ಪಿದಲ್ಲಿ 1 ವಾರ ಜೈಲು, ಸೆಕ್ಷನ್ 504 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನ ಕಾರಾಗೃಹವಾಸ , ಸೆಕ್ಷನ್ 506 ಜತೆಗೆ 149 ರ ಅಪರಾಧಕ್ಕೆ 1 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ,

ದಂಡ ತೆರಲು ತಪ್ಪಿದಲ್ಲಿ 15 ದಿನ ಕಾರಾಗೃಹವಾಸ, ಸೆಕ್ಷನ್ 354 ಜೊತೆಗೆ 149 ರ ಅಪರಾಧಕ್ಕೆ 2 ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದಲ್ಲದೆ ಎಲ್ಲಾ ಹದಿನೈದು ಮಂದಿ ಆರೋಪಿಗಳು ತಲಾ ರೂ. 3750 ರಂತೆ 50 ಸಾವಿರ ರೂ. ಪರಿಹಾರವನ್ನು ನೊಂದ ಮಹಿಳೆಗೆ ನೀಡಬೇಕೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...