LATEST NEWS
ಭಾರತದ ಮೊದಲ ಕಿರಿಯ ಕ್ಯಾಡಾವೆರ್ ಡೊನರ್:ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ..!
ಭಾರತದ ಮೊದಲ ಕಿರಿಯ ಕ್ಯಾಡಾವೆರ್ ಡೊನರ್:ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ..!
ನವದೆಹಲಿ : ಬದುಕುವವರೆಗೆ ಬದುಕಿನಲ್ಲಿ ಸಾರ್ಥಕ ಕೆಲಸಗಳನ್ನು ಮಾಡಿ ಸತ್ತ ಮೇಲೂ ಹೆಸರು ಉಳಿಯುವಂತೆ ಬದುಕುವುದು ನೂರರಲ್ಲಿ ಕೈ ಲೆಕ್ಕಕ್ಕೆ ಸಿಗುವಷ್ಟು ಜನ ಮಾತ್ರ.
ಬದುಕು ಅರಳುವ ಮುನ್ನ,ಕನಸು ಚಿಗುರುವ ಮುನ್ನ ದೇಹ ಕಮರಿ ಹೋದಾಗ, ಅಂಗಾಂಗ ದಾನ ಮಾಡಿ ಇತರ ದೇಹಕ್ಕೆ ಜೀವ ನೀಡುವ ವ್ಯಕ್ತಿಗಳು ಮಾದರಿಯೆನ್ನಿಸಿಕೊಳ್ಳುತ್ತಾರೆ.
ಅಂಥ ಮಾದರಿ ಆಗಿ, ಇಪ್ಪತ್ತು ತಿಂಗಳು ಬದುಕಿ ಅನಿರೀಕ್ಷಿತವಾಗಿ ಇಹಲೋಕ ತ್ಯಜಿಸಿದ ಧನಿಷ್ಥಾ ಎಂಬ ಪುಟ್ಟ ಬಾಲಕಿಯ ಕಥೆಯಿದು.
ಆಗಷ್ಟೇ ಅಂಬೆಗಾಲಿಟ್ಟು, ಅಮ್ಮನ ಮಡಿಲಲ್ಲಿ ನಲಿಯುತ್ತಾ, ಅಪ್ಪನ ಬೆಚ್ಚಗಿನ ಹೆಗಲಿನಲ್ಲಿ ನಿದ್ರಿಸಬೇಕಾದ ಧನಿಷ್ಥಾ ಅದೊಂದು ದಿನ, ಆಡುತ್ತಾ, ತೆವಳುತ್ತಾ, ಮನೆಯ ಬಾಲ್ಕನಿಯಿಂದ ಕೆಳಗೆ ಬೀಳುತ್ತಾಳೆ.
ಆ ಕೂಡಲೇ ಮಗುವನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ರವಾನಿಸುತ್ತಾರೆ. ಜನವರಿ 11 ರಂದು ಧನಿಷ್ಥಾ ಕೊನೆಯುಸಿರೆಳೆಯುತ್ತಾಳೆ. ಆಸ್ಪತ್ರೆಯ ವೈದ್ಯರು, ಧನಿಷ್ಥಾಳ ಮೆದುಳು ಸ್ಥಗಿತಗೊಂಡಿದೆ ಎಂದು ಹೇಳುತ್ತಾರೆ.
ವೈದ್ಯರು ನಿಮ್ಮ ಮಗಳು ಬದುಕುವುದಿಲ್ಲ ಎನ್ನುವ ಸಿಡಿಲಿನ ಆಘಾತದ ಸುದ್ದಿಯನ್ನು ಹೇಳಿ, ಭಾರತದಲ್ಲಿ ಅಂಗಾಂಗ ಪ್ರತಿ ವರ್ಷ ಅಂಗಾಂಗಗಳಿಲ್ಲದೆ 5 ಲಕ್ಷ ಜನ ಸಾಯುತ್ತಾರೆ.
ನಿಮ್ಮ ಮಗಳ ಅಂಗಾಂಗವನ್ನು ದಾನ ಮಾಡಿ ಇತರರಿಗೆ ಜೀವ ಕೊಡಬಹುದೇ ಎಂದು ಕೇಳುತ್ತಾರೆ. ಅನಿರೀಕ್ಷಿತವಾಗಿ ಮಗಳನ್ನು ಕಳೆದುಕೊಂಡ ಮಾಸದ ದುಃಖ ಒಂದು ಕಡೆಯಾದರೆ,ಅಂಗಾಂಗ ದಾನವನ್ನು ಮಾಡಿ ಇತರರ ಜೀವ ಉಳಿಸುವ ನಿರ್ಧಾರ ಇನ್ನೊಂದು ಕಡೆ.
ಧನಿಷ್ಥಾಳ ಅಪ್ಪ ಅಮ್ಮ ಮಗಳ ಅಂಗಾಂಗ ದಾನವನ್ನು ಮಾಡಲು ಒಪ್ಪುತ್ತಾರೆ. ಧನಿಷ್ಥಾಳ ಅಂಗಾಂಗಳು ಉತ್ತಮ ಸ್ಥಿತಿಯಲ್ಲಿ ಇರುವುದರಿಂದ ಅದನ್ನು ವೈದ್ಯರು ಕಸಿ ಮಾಡುತ್ತಾರೆ.
ಧನಿಷ್ಥಾಳ ಹೃದಯ,ಯಕೃತ್ತು,ಎರಡು ಮೂತ್ರ ಪಿಂಡ, ಮತ್ತು ಎರಡು ಕಾರ್ನಿಯಾಗಳನ್ನು ಆಸ್ಪತ್ರೆಯಲ್ಲಿ ತೆಗೆದು ಅಗತ್ಯವಿದ್ದ ರೋಗಿಗಳಿಗೆ ನೀಡಲಾಯಿತು.
ಮೂತ್ರ ಪಿಂಡಗಳನ್ನು ವಯಸ್ಕರಿಗೆ ನೀಡಿದರೆ, ಹೃದಯ ಹಾಗೂ ಯಕೃತ್ತು ಮಕ್ಕಳಿಗೆ ನೀಡಲಾಗಿದೆ.ಅಂಗಾಂಗ ದಾನದಿಂದ ಧನಿಷ್ಥಾ ಭಾರತದ ಮೊದಲ ಕಿರಿಯ ಕ್ಯಾಡಾವೆರ್ ಡೊನರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾಳೆ.
DAKSHINA KANNADA
ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.
ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!
ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
DAKSHINA KANNADA
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.
ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!
“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್ ಎಂಬುದನ್ನು ಸೆಕ್ಸ್ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್ ದಿ ಟ್ರುತ್ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್ ಸಾಹ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.
49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.
- chikkamagaluru7 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
- DAKSHINA KANNADA6 days ago
ಮೂಡುಬಿದಿರೆ : ಜೂನ್ 14 ರಿಂದ ಮೂರು ದಿನಗಳ ಕಾಲ ಹಲಸು – ವೈವಿಧ್ಯಮಯ ಹಣ್ಣುಗಳ ಮಹಾಮೇಳ
- DAKSHINA KANNADA4 days ago
ಮಂಗಳೂರಿನ ಮೊದಲ ಬಸ್ ಇದೇ ನೋಡಿ…!
- LATEST NEWS7 days ago
ನಿದ್ದೆ ಮಾಡುತ್ತಿರುವಂತೆ ನಟನೆ…ಆದರೆ ಮಾಡಿದ್ದು ಕಳ್ಳತನ…!