Connect with us

    LATEST NEWS

    ಪ್ರಕೃತಿ ವಿಕೋಪ: 2 ಹೆಚ್ಚುವರಿ SDRF ತಂಡ-200 ಕೋಟಿ ರೂ ಬಿಡುಗಡೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್‌ಡಿಆರ್‌ಎಫ್‌ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.


    ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

    ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಿದ್ದು,

    ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ, ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

    200 ಕೋಟಿ ರೂ. ಬಿಡುಗಡೆ
    ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
    ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳ ಹಾನಿ ಕುರಿತೂ ಸಹ ಜಾಗೃತರಾಗಿ,

    ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಕ್ಕಾಗಿ ಎಸ್ಕಾಂಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚುವರಿ ವಿದ್ಯುತ್ ಕಂಬಗಳು, ಟ್ರಾನ್ಫಾರ್ಮರ್‌ಗಳ ದಾಸ್ತಾನು ಖಾತರಿಪಡಿಸಲು ಸೂಚಿಸಿದರು.

    ಬೆಳೆಹಾನಿ ಜಂಟಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ, ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾನಿ ಸಮೀಕ್ಷೆ ವಾಸ್ತವಿಕವಾಗಿರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ದಿಢೀರ್ ಪ್ರವಾಹ ಮುನ್ನೆಚ್ಚರಿಕೆ
    ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

    ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಾಗ ಆಣೆಕಟ್ಟುಗಳ ಕೆಳ ಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಬೇಕು. ರಾಜ್ಯದ ಹಲವಾರು ಕೆರೆಗಳು ತುಂಬಿದ್ದು, ಅಪಾಯದ ಅಂಚಿನ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

    ಭೂಕುಸಿತ
    ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಜನರನ್ನು ಕಡ್ಡಾಯವಾಗಿ ಸ್ಥಳಾಂತರಿಸಬೇಕು.

    ರಸ್ತೆಗಳ ಮೇಲೆ ಭೂಕುಸಿತ ಉಂಟಾದಲ್ಲಿ ತೆರವುಗೊಳಿಸಲು ತಂಡಗಳನ್ನು ದಿನದ 24 ಗಂಟೆಯೂ ಸನ್ನದ್ಧವಾಗಿರಿಸುವಂತೆ ಸೂಚಿಸಿದರು.

    ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು. ಕಾಳಜಿ ಕೇಂದ್ರಕ್ಕೆ ಬರದ ನಿರಾಶ್ರಿತರಿಗೆ ಡ್ರೈ ರೇಷನ್ ಕಿಟ್ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
    ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,

    ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

    ಸಭೆಯ ಮುಖ್ಯಾಂಶಗಳು
    ಹಾನಿಯ ಪ್ರಮಾಣ (ಜೂನ್ 1 ರಿಂದ ಆಗಸ್ಟ್ 6ರ ವರೆಗೆ)
    1. ಮಾನವ ಜೀವ ಹಾನಿ 70
    2. ಜಾನುವಾರು ಜೀವಹಾನಿ 507
    3. ಸಂಪೂರ್ಣ ಹಾನಿಯಾಗಿರುವ ಮನೆಗಳು 3559
    4. ಭಾಗಶ: ಹಾನಿಯಾಗಿರುವ ಮನೆಗಳು 17212
    5. ಕೃಷಿ ಬೆಳೆ ಹಾನಿ 129087 ಹೆಕ್ಟೇರ್
    6. ತೋಟಗಾರಿಕಾ ಬೆಳೆ ಹಾನಿ 7942 ಹೆಕ್ಟೇರ್
    7. ರಸ್ತೆ 3162 ಕಿ.ಮೀ
    8. ಗ್ರಾಮೀಣ ರಸ್ತೆ 8445 ಕಿ.ಮೀ
    9. ಸೇತುವೆ ಮತ್ತು ಕಲ್ವರ್ಟ್ 1068
    10. ಶಾಲೆಗಳು- 4531
    11. ಅಂಗನವಾಡಿಗಳು 222
    12. ಹಾಳಾಗಿರುವ ವಿದ್ಯುತ್ ಕಂಬಗಳ ಸಂಖ್ಯೆ 16760
    13. ಟ್ಯಾನ್ಸ್ ಫಾರ್ಮರ್ ಗಳು 1469
    14. ಹಾನಿಯಾಗಿರುವ ವೈಯರ್ 409 ಕಿ.ಮೀ
    15. ಸಣ್ಣ ನೀರಾವರಿ ಕೆರೆಗಳು 93 damage

    ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಆಗಸ್ಟ್ 2 ರ ಮಾಹಿತಿಯಂತೆ ಒಟ್ಟು 657 ಕೋಟಿ ರೂ. ಲಭ್ಯವಿತ್ತು. ಇಂದು ರಾಜ್ಯ ಸರ್ಕಾರ 21 ಜಿಲ್ಲೆಗಳಿಗೆ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡಿದೆ.

    LATEST NEWS

    ಸ್ಯಾಂಡಲ್‌ವುಡ್ ನಟಿಯರನ್ನು ಸೌತೆಕಾಯಿಗೆ ಕಾವಲಿಸಿದ ರೈತ; ಆ ಡಿಫರೆಂಟ್ ಐಡಿಯಾ ಯಾವುದು ಗೊತ್ತಾ ??

    Published

    on

    ಮಂಗಳೂರು/ರಾಮನಗರ: ಸೌತೆಕಾಯಿ ಮೇಲೆ ದೃಷ್ಠಿ ಬೀಳದಂತೆ ಚಿನ್ನಪಟ್ಟಣ ತಾಲೂಕಿನ ಗರಕಹಳ್ಳಿನ ರೈತ ಇಡೀ ಸ್ಯಾಂಡಲ್‌ವುಡ್ ನಟಿಯರ ಸುಂದರವಾದ ಭಾವಚಿತ್ರಗಳನ್ನು ಹೊಲದಲ್ಲಿ ಅಳವಡಿಸಿದ್ದಾನೆ. ತನ್ನ ಬೆಳೆ ಕಾಪಾಡಿಕೊಳ್ಳಲು ಈ ದಾರಿಯನ್ನು ಆರಿಸಿದ್ದಾನೆ ಎನ್ನಲಾಗಿದೆ.


    ಸ್ಯಾಂಡಲ್‌ವುಡ್ ನಟಿಯರಾದ ರಮ್ಯ, ರಾಗಿಣಿ ದ್ವಿವೇದಿ, ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಸೋನಾಲ್ ಸೇರಿ ಇನ್ನು ಇಡೀ ಸ್ಯಾಂಡಲ್‌ವುಡ್ ನಟಿಯರ ಭಾವಚಿತ್ರವನ್ನು ಪ್ಲೇಕ್ಸ್ ಮಾದರಿಯಲ್ಲಿ ಹಾಕಿದ್ದ ಈ ಐಡಿಯಾ ಎಲ್ಲರಿಗೂ ಹೊಸತೆನಿಸಿದೆ.
    ಎಲ್ಲಾ ರೈತರು ತಮ್ಮ ತಮ್ಮ ಬೆಳೆಗೆ ದೃಷ್ಠಿ ತಾಕದಂತೆ ಮಾಡಲು ಇಂಥಹದ್ದೇ ಐಡಿಯಾ ಮಾಡಿದರ ಹೇಗಿರುತ್ತೆ ಅಂತ ಚರ್ಚೆ ಶುರು ಮಾಡಿದೆ.
    ಹೊಲದಲ್ಲಿ ನಟಿಮಣಿಯರ ಮುಗುಳುನಗುವ ಸುಂದರ ಫೋಟೋಗಳನ್ನು ಅಳವಡಿಸುವ ಮೂಲಕ ದಾರಿ ಮಧ್ಯೆ ಹೋಗುವವರ ದೃಷ್ಠಿಯನ್ನು ಹಿರೋಯಿನ್‌ಗಳ ಮೇಲೆ ಬೀಳುವಂತೆ ಮಾಡಿ ದೃಷ್ಠಿ ತಾಕದೆ ಇರಲಿ ಎನ್ನುವುದು ಈ ರೈತನ ಐಡಿಯಾ ಎಂದು ಹೇಳಿಕೊಂಡಿದ್ದಾನೆ.

    Continue Reading

    FILM

    ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ಲವ್ಲಿ ವಿಶ್

    Published

    on

    ಕಾಟೇರ, ರಾಬರ್ಟ್ ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ್ದಾರೆ.

    ತರುಣ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ, ಜಗತ್ತಿನ ಅತೀ ಹೆಚ್ಚು ಪ್ರೀತಿಸುವ, ಕಾಳಜಿ ತೋರಿಸುವ, ಕರುಣೆಯ ಮನಸಿರುವ ಗಂಡನಿಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನನ್ನು ಪ್ರತಿದಿನ ಪ್ರೇರೆಪಿಸುವ ಹಾಗೂ ನಾನು ಜೊತೆಯಾಗಿ ನಡೆಯಲು ಬಯಸುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು. ಐ ಲವ್‌ ಯೂ ಎಂದು ಸೋನಲ್ ಅವರು ಪತಿಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಅದಕ್ಕೆ ತರುಣ್‌ ಕೂಡ ಪ್ರತಿಕ್ರಿಯಿಸಿ, ಥ್ಯಾಂಕ್ಯೂ ಲವ್‌ ಎಂದಿದ್ದಾರೆ.

    ಸದ್ಯ ತರುಣ್ ದಂಪತಿ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ನಟಿ ಭೇಟಿ ನೀಡಿದ್ದಾರೆ. ಅಂದಹಾಗೆ, ಆಗಸ್ಟ್‌ 11ರಂದು ತರುಣ್‌ ಮತ್ತು ಸೋನಲ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

    Continue Reading

    LATEST NEWS

    ದೇವಸ್ಥಾನಗಳಲ್ಲಿ ಚಲನಚಿತ್ರ ಶೂಟಿಂಗ್…ಕೇರಳ ಹೈಕೋರ್ಟ್ ಗರಂ..!

    Published

    on

    ಮಂಗಳೂರು/ಕೇರಳ: ದೇವಸ್ಥಾನಗಳಲ್ಲಿ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವ ವಿಚಾರವಾಗಿ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯಗಳು ಪೂಜಾ ಸ್ಥಳವಾಗಿದ್ದು, ಚಲನಚಿತ್ರ ಚಿತ್ರೀಕರಣದ ಸ್ಥಳವಾಗಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತ್ರಿಪ್ಪುಣಿತೂರ ಶ್ರೀ ಪೂರ್ಣತ್ರಯಿಶ ದೇವಸ್ಥಾನದಲ್ಲಿ ಸಿನೆಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ವಿಚಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

    ಹಿಂದೂಯೇತರ ಧರ್ಮಗಳ ಚಿತ್ರೀಕರಣಕ್ಕೆ ದೇವಸ್ಥಾನದ ಆವರಣದ ಒಳಗೆ ಅನುಮತಿ ನೀಡಿದ ವಿಚಾರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಧಾರ್ಮಿಕ ಸ್ಥಳಗಳ ಪಾವಿತ್ರ್ಯತೆ ಕಾಪಾಡುವುದು ಮುಖ್ಯವಾಗಿದ್ದು, ವಾಣಿಜ್ಯ ಕಾರಣದಿಂದ ನಡೆಯುವ ಸಿನೆಮಾ ಚಿತ್ರೀಕರಣದಿಂದ ಕ್ಷೇತ್ರಕ್ಕೆ ಅಗೌರವ ತಂದಂತಾಗುತ್ತದೆ ಎಂದು ವಾದಿಸಲಾಗಿತ್ತು. ಈ ರೀತಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡುವುದರಿಂದ ಭಕ್ತರ ಭಾವನೆಗೂ ಘಾಸಿ ಆಗುತ್ತದೆ. ಉತ್ಸವದ ಸಂದರ್ಭದಲ್ಲಿ ಮಾವುತರು ಮದ್ಯ ಸೇವಿಸುವುದು ಮತ್ತು ಸಂದರ್ಶಕರು ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸುವುದು ಮೊದಲಾದ ಬಗ್ಗೆ ನ್ಯಾಯಾಲಯದ ಗಮನ ಸೆಳೆಯಲಾಗಿತ್ತು.

    ಇದನ್ನೂ ಓದಿ :ಬಿಗ್‌ಬಾಸ್ ಮನೆಯಲ್ಲಿ ನಾವಿನ್ನು ಯಾವ ಆಟ ಆಡಲ್ಲ ಎಂದ ಗೋಲ್ಡ್​​ ಸುರೇಶ್​!
    ಈ ವಿಚಾರವಾಗಿ ಹೈಕೋರ್ಟ್‌, ಕೇರಳ ರಾಜ್ಯ ಸರ್ಕಾರ ಮತ್ತು ಕೊಚ್ಚಿನ್ ದೇವಸ್ವಂ ಬೋರ್ಡ್‌ ನಿಂದ ವಿವರಣೆ ಕೇಳಿದೆ. ದೇವಸ್ಥಾನಗಳಲ್ಲಿ ಧಾರ್ಮೀಕೇತರ ಚಿತ್ರೀಕರಣಕ್ಕೆ ಅವಕಾಶ ನೀಡುವುದರಿಂದ ಹಿಂದೂ ದೇಗುಲಗಳ ನಿಯಮ ಉಲ್ಲಂಘಿಸಿದಂತಾಗುತ್ತದೆ. ಪೂಜೆ ಮತ್ತು ಭಕ್ತಿಯ ಮೌಲ್ಯಗಳನ್ನು ತುಂಬುವ ಜಾಗದಲ್ಲಿ ವ್ಯಾಪಾರೀಕರಣದ ಪ್ರವೃತಿ ಬೆಳೆಯಲು ಅವಕಾಶ ಹೇಗೆ ನೀಡಿದ್ದೀರಿ ಎಂದು ಹೈಕೋರ್ಟ್‌ ಪ್ರಶ್ನೆ ಮಾಡಿದೆ.

    Continue Reading

    LATEST NEWS

    Trending