ದೆಹಲಿಯ ನಿಜಾಮುದ್ದೀನ್ ಜಮಾತ್ ಸಭೆಯಲ್ಲಿ ಪಾಲ್ಗೊಂಡವರಲ್ಲಿ ಕೊರೋನಾ ಪಾಸಿಟಿವ್: 45 ಮಂದಿ ಕರ್ನಾಟಕದವರು
ಬೆಂಗಳೂರು : ದೆಹಲಿಯಲ್ಲಿ ನಡೆದ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಐವರರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದ್ದು ರಾಜ್ಯದ ಸುಮಾರು 45 ಮಂದಿ ಭಾಗವಹಿಸಿದ್ದರು.
ಈ ಮಾಹಿತಿಯನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ. ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದೆ.ರಾಜ್ಯದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ.
ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. ಹೀಗಾಗಿ ಜಮಾತ್ ನಲ್ಲಿ ಪಾಲ್ಗೊಂಡ ಬಹತೇಕ ಮಂದಿಯಲ್ಲಿ ಸೋಂಕು ಹರಡಿರುವ ಸಾಧ್ಯತೆಗಳಿವೆ. ಹಾಗಾಗಿ ಇವರನ್ನು ಪತ್ತೆ ಮಾಡಿ, ಕ್ವಾರಂಟೈನ್ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ.https://twitter.com/sriramulubjp/status/1244885759074734080
ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆಹಚ್ಚಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಉಳಿದವರ ಮಾಹಿತಿ ಕಲೆ ಹಾಕಲಾಗುತ್ತಿದೆ,
ಈ ಕೂಟಕ್ಕೆ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ.
ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ, ಅವರನ್ನು ಕ್ವಾರಂಟೈನ್ ಮಾಡಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.