Friday, July 1, 2022

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ ಬೆನ್ನಲ್ಲೇ ಗ್ಯಾಸ್‌ಗೆ 200 ರೂ ಸಬ್ಸಿಡಿ ಘೋಷಿಸಿದ ಕೇಂದ್ರ

ನವದೆಹಲಿ: ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ತಿಳಿಸಿದ್ದಾರೆ.

ಇದರಿಂದ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.


ಪ್ಲಾಸ್ಟಿಕ್ ಉತ್ಪನ್ನಗಳಲ್ಲಿ ನಮ್ಮ ಆಮದು ಅವಲಂಬನೆ ತೀವ್ರವಾಗಿರುವಲ್ಲಿ ಕಚ್ಚಾ ಸಾಮಗ್ರಿಗಳು ಹಾಗೂ ಉಪ ಸಾಮಗ್ರಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕೂಡ ನಾವು ಕಡಿಮೆ ಮಾಡುತ್ತಿದ್ದೇವೆ. ಸ್ಟೀಲ್‌ಗೆ ಬೇಕಾದ ಕೆಲವು ಕಚ್ಚಾ ವಸ್ತುಗಳ ಆಮದು ಸುಂಕವನ್ನು ಉಳಿಸಲಾಗಿದೆ.

ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುತ್ತಿದೆ. ಸಿಮೆಂಟ್ ದರದ ಹೊರೆ ಇಳಿಸುವ ಸಲುವಾಗಿ, ಉತ್ತಮ ಸರಬರಾಜು ವ್ಯವಸ್ಥೆ ಮೂಲಕ ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...