Thursday, April 22, 2021

ಸಬ್ ರಿಜಿಸ್ಟ್ರಾರ್ ಕಛೇರಿಯ ಅವ್ಯವಹಾರ ಪ್ರಕರಣ: 3 ಪತ್ರ ಬರಹಗಾರರು , 4 ಉಪ ನೋಂದಣಾಧಿಕಾರಿಗಳಿಗೆ ಜೈಲು ಶಿಕ್ಷೆ..!

ಮಂಡ್ಯ:ಮಂಡ್ಯ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ  2006ರಲ್ಲಿ ಅವ್ಯವಹಾರ ನಡೆದಿರುವ ಕುರಿತು ವರದಿಯಾಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಮೂವರು ಪತ್ರ ಬರಹಗಾರರು ಮತ್ತು ನಾಲ್ವರು ಉಪ ನೋಂದಣಾಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿ,  1ಕೋಟಿ 29ಲಕ್ಷ ರೂಪಾಯಿ ದಂಡ ವಿಧಿಸಿ,ಆದೇಶ ಹೊರಡಿಸಲಾಗಿದೆ. ಸರ್ಕಾರಕ್ಕೆ ವಂಚಿಸಿ ಮೋಸ ಮಾಡುವ ಉದ್ದೇಶದಿಂದ ರಾಜಸ್ವದ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿರುವ ಕುರಿತು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಕುರಿತು ರಮೇಶ್ ಎಸ್ ಗಾಣಿಗಾರ್ ಆರೋಪಿಗಳಿಗೆ ಶಿಕ್ಷೆಯ ತೀರ್ಪು ನೀಡಿದ್ದಾರೆ.

ನಾಲ್ವರು ಉಪನೋಂದಣಾಧಿಕಾರಿಗಳಾಗಿದ್ದ ಲೀಲಾವತಿ, ಸುನಂದಾ ಎಸ್ ಎನ್, ಪ್ರಭಾ, ಚೆಲುವರಾಜು ಅವರಿಗೆ ನಾಲ್ಕು ವರ್ಷ ಜೈಲು ದಂಡ ಹಾಗೂ ಮೂವರು ಪತ್ರ ಬರಹಗಾರರಾದ, ಬಿ.ಕೆ. ರಾಮರಾವ್, ನರಸಿಂಹಮೂರ್ತಿ ಹಾಗೂ ಚಂದ್ರಶೇಖರ್ ಗೆ 5ವರ್ಷ ಜೈಲು ಶಿಕ್ಷೆ 1ಕೋಟಿ 29ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ, ಹಲವು ಪ್ರಕರಣಗಳಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆಯೂ  ಆರೋಪ ಕೇಳಿ ಬಂದಿದೆ. 2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಎಂಬವರು ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆದು ಇದೀಗ ತೀರ್ಪು ಹೊರ ಬಿದ್ದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...