ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದರು.
ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಬಾಕಿ ಉಳಿದಿರುವ ಯೋಜನೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಇದರುಎಂದು ಮೂಲಗಳು ತಿಳಿಸಿವೆ.