Tuesday, October 19, 2021

2024ರಲ್ಲಿ ದುಷ್ಟ ಶಕ್ತಿಯಾದ ರಾವಣನನ್ನು ಸಂಪೂರ್ಣ ದಹಿಸಲಾಗುವುದು: ಸಂಜಯ್ ರಾವತ್

ಮುಂಬೈ: 2024ರಲ್ಲಿ ದುಷ್ಟ ಶಕ್ತಿಯಾದ ರಾವಣನನ್ನು ಸಂಪೂರ್ಣವಾಗಿ ದಹಿಸಲಾಗುವುದು ಎಂದು ಶಿವಸೇನೆ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ ಮಾರ್ಮಿಕವಾಗಿ ಹೇಳಿದ್ದಾರೆ.


ಸದ್ಯ ದೇಶದ ಜನತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ರಾವಣನ ರೂಪದಲ್ಲಿ ಕಾಡುತ್ತಿದ್ದು, 2024ರ ನಂತರ ಈ ರಾವಣನನ್ನು ಸಂಪೂರ್ಣವಾಗಿ ದಹಿಸಲಾಗುವುದು ಎಂದು ರಾವತ್ ಹೇಳಿದ್ದಾರೆ.
ನಾಳೆಯಿಂದ ದುಷ್ಟ ಶಕ್ತಿಯ ದಹನ ಆರಂಭವಾಗಿದೆ. ರಾವಣನ ರೂಪದಲ್ಲಿ ನಮ್ಮನ್ನು ಕಾಡುತ್ತಿರುವ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಗಳನ್ನು ನಾವು ದಹನ ಮಾಡಬೇಕಿದೆ.

2024ರಲ್ಲಿ ನಾವು ಇದನ್ನು ಸಾಧಿಸುತ್ತೇವೆ ಎಂದು ರಾವತ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲಿದ್ದೇವೆ ಎಂಬುದು ರಾವತ್ ಮಾತಿನ ಅರ್ಥ ಎಂದು ವಿಶ್ಲೇಷಿಸಲಾಗುತ್ತಿದೆ.
ನಾವು ಬೆಲೆ ಏರಿಕೆ ಎಂಬ ದುಷ್ಟ ಶಕ್ತಿಯನ್ನು ಮಣಿಸಬೇಕಿದೆ.

ಈ ಹೋರಾಟ ಸುದೀರ್ಘವಾಗಿದ್ದು, 2024ರಲ್ಲಿ ಗುರಿ ಸಾಧಿಸಲಿದ್ದೇವೆ. ಜನರ ಜೇಬಿಗೆ ಕತ್ತರಿ ಹಾಕುವ ನೀತಿಯನ್ನು ನಾವು ಸೋಲಿಸಲಿದ್ದೇವೆ ಎಂದು ರಾವತ್ ಹೇಳಿದ್ದಾರೆ. ವಿಶೇಷವೆಂದರೆ 2024ರಲ್ಲಿ ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಒಟ್ಟಿಗೆ ಬರಲಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...