ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ: 21 ಸಿಬ್ಬಂದಿಗೆ ಸೋಂಕು.!
ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ: 21 ಸಿಬ್ಬಂದಿಗೆ ಸೋಂಕು.!
ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು,ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ.
ಐಎನ್ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್ಎಸ್ ಆಂಗ್ರೆಯಲ್ಲಿ ನೀಡಲಾಗಿದ್ದ ವಸತಿ ನಿಲಯಗಳಲ್ಲಿ ಇದ್ದರು.
ಆಂಗ್ರೆ ನೌಕಾನೆಲೆ ಸರಕು ಸಾಗಣೆ ಮತ್ತು ಆಡಳಿತ ವ್ಯವಹಾರಗಳಲ್ಲಿನ ನೌಕಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನೌಕಾಪಡೆ ಕಮಾಂಡ್ಗೆ ಸಹಕಾರಿಯಾಗಿದೆ.
ಅಗತ್ಯ ಕರ್ತವ್ಯಗಳಿಗಾಗಿ ನೌಕಾಪಡೆ ವಲಯಗಳಲ್ಲಿ ಸಿಬ್ಬಂದಿ ಸಂಚರಿಸಿದ್ದರು. ಈ ಹಿನ್ನೆಲೆ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಊಹಿಸಲಾಗಿದೆ.
ಏಪ್ರಿಲ್ 7ರಂದು ನೌಕಾಪಡೆಯ ಸೇಲರ್ ಒಬ್ಬರಲ್ಲಿ ಸೊಂಕು ಕಾಣಿಸಿಕೊಂಡಿತ್ತು. ಸದ್ಯ 21 ಮಂದಿಗೆ ಕೊರೊನಾ ತಗುಲಿದೆ.
ಆಂಗ್ರೆ ನೌಕಾನೆಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಇಲ್ಲಿರುವ ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
INS ಆಂಗ್ರೆ ನೌಕಾನೆಲೆಯಿಂದ ಕೆಲವು 100 ಮೀಟರ್ ಗಳ ಅಂತರದಲ್ಲಿ ಯುದ್ಧ ನೌಕೆಗಳು ಹಾಗೂ ಸಬ್ಮೆರಿನ್ಗಳು ಕಾರ್ಯನಿರ್ವಸುತ್ತಿವೆ.
ಆದರೆ ಅದರಲ್ಲಿನ ಯಾವುದೇ ಸಿಬ್ಬಂದಿಗೆ ಸೋಂಕು ತಗುಲಿಲ್ಲ. ಹೀಗಾಗಿ ನೌಕಾಪಡೆ ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ದೇಶದ ಸಾಥ್ ನೀಡಲಿದೆ ಎಂದು ನೌಕಾಪಡೆ ತಿಳಿಸಿದೆ.
ಭಾರತದಲ್ಲಿ ಸದ್ಯ 14,425 ಮಂದಿಗೆ ಸೋಂಕು ತಗುಲಿದ್ದು, 488 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 2,045 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ರಾಜ್ಯದಲ್ಲಿ ಮಾಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಲ್ಲಿ ಒಟ್ಟು 3,320 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 201 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.