Friday, July 1, 2022

ಇಪ್ಪತ್ತೆರಡು ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಇಲಾಖೆಯಿಂದ ಆರ್ಡರ್

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬದಲಿಗೆ, 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಈ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಠಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅತಿಥಿ ಉಪನ್ಯಾಸಕರನ್ನು ಸಂಬಂಧಪಟ್ಟ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಮೂಲಕವೇ ಮಾಡಬೇಕು.
ಪ್ರಾಥಮಿಕ ಶಾಲಾ ಶೀಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ, ವಿದ್ಯಾರ್ಥಿಗಳಿರುವ ಶಾಲೆಯ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡಬೇಕು.

ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕ ನಿರ್ವಹಿಸಬೇಕು ಎಂಧು ಸೂಚಿಸಲಾಗಿದೆ.

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಮಾಸಿಕ 7500 ರೂ. ನಿಗದಿಪಡಿಸಲಾಗಿದೆ.ರಾಯಚೂರಿನಲ್ಲಿ ಹೆಚ್ಚು ಅಂದರೆ 1,833 ಹಾಗೂ ಕಡಿಮೆ ಬೆಂಗಳೂರು ಉತ್ತರದಲ್ಲಿ 139 ಹುದ್ದೆಗಳು ಖಾಲಿ ಇವೆ.

LEAVE A REPLY

Please enter your comment!
Please enter your name here

Hot Topics

ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಣೆ: ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೆಲವು ಕಡೆ...

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: 1,249 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ.1,154 ಮಂದಿ ಡಿಸ್ಚಾರ್ಜ್...

ವಿಶ್ವಾಸಮತಕ್ಕೆ ಮುನ್ನವೇ ಮಹಾರಾಷ್ಟ್ರ ಸಿಎಂ ರಾಜೀನಾಮೆ ಘೋಷಣೆ

ಮಹಾರಾಷ್ಟ್ರ: ಸುಪ್ರೀಂಕೋರ್ಟ್ ವಿಶ್ವಾಸ ಮತಯಾಚನೆ ಮಾಡಲು ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.ತಡರಾತ್ರಿ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ ಠಾಕ್ರೆ ಭಗತ್ ಸಿಂಗ್ ಕೋಶಿಯಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ...