Thursday, February 9, 2023

ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿಬರುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆ

ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್‌ (22) ಎಂದು ಗುರುತಿಸಲಾಗಿದೆ.


ದೂರಿನ ವಿವರ
ರಾಬಿಯಾ ಪರ್ವೀನ್ ನಗರದ ಲೇಡಿಗೋಶನ್ ಬಳಿಯ ಟೈಲರಿಂಗ್ ಮೆಶಿನ್‌ನ ರಿಪೇರಿ/ ಸೇಲ್ಸ್ ಅಂಗಡಿಯಲ್ಲಿ ಸೇಲ್ಸ್ ಗರ್ಲ್ ಆಗಿ ಸುಮಾರು 8 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದಳು.

ಜು.18 ರಂದು ರಬಿಯಾ ಪರ್ವೀನ್ ಎಂದಿನಂತೆ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಕೆಲಸಕ್ಕೆ ಹೋಗಿದ್ದು, ಸಂಜೆ 4:30 ಗಂಟೆಗೆ ಕೆಲಸ ಮಾಡುವ ಸ್ಥಳದಿಂದ ಬಂದರಿನಲ್ಲಿರುವ ಸ್ನೇಹಿತರ ಮದುವೆಗೆ ಹೋಗಿಬರುತ್ತೇನೆಂದು ಹೇಳಿ ಹೋದವಳು ವಾಪಾಸ್ಸು ಬಂದಿರುವುದಿಲ್ಲ.

ನಾಪತ್ತೆಯಾದಾಗಿನಿಂದ ಫೋನ್ ಕರೆ ಮಾಡಿದಾಗ ಆಕೆಯ ಫೋನ್ ಸ್ವಿಚ್ ಆಫ್ ಆಗಿದೆ. ಈ ಬಗ್ಗೆ ಆಕೆಯ ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದಾಗ ನಾಪತ್ತೆ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ. ಈ ಬಗ್ಗೆ ನಗರ ಉತ್ತರ (ಬಂದರು) ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...