Thursday, August 11, 2022

ದ.ಕ ಜಿಲ್ಲೆ ಪ್ರವೇಶಿಸಿದ 228 ಜನರಿಗೆ ಕೊರೋನಾ ಪಾಸಿಟಿವ್‌: ನಕಲಿ ನೆಗೆಟಿವ್​ ವರದಿ ತರುತ್ತಿರುವ ಶಂಕೆ

ಮಂಗಳೂರು: ಕೇರಳ-ಮಹಾರಾಷ್ಟ್ರದಿಂದ ನೆಗೆಟಿವ್‌ ವರದಿಯೊಂದಿಗೆ ಕರ್ನಾಟಕ ಪ್ರವೇಶಿಸಿದ 228 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿ ಜಿಲ್ಲೆಯಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ.

ನಿನ್ನೆ ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 284 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 3,555 ಕೊರೊನಾ ಆಕ್ಟಿವ್ ಪ್ರಕರಣಗಳು ಜಿಲ್ಲೆಯಲ್ಲಿವೆ.

RTPCR ನೆಗೆಟಿವ್ ವರದಿಯೊಂದಿಗೆ ಬಂದ ಕೇರಳ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಜಿಲ್ಲಾಡಳಿತದ ನಿದ್ದೆಗೆಡಿಸಿದೆ.

RTPCR ನೆಗೆಟಿವ್ ವರದಿ ಇದ್ದರೂ ಒಂದು ವಾರ ಐಸೋಲೆಷನ್ ನಲ್ಲಿ ಇರುವಂತೆ ಜಿಲ್ಲಾಡಾಳಿತ ಕಡ್ಡಾಯ ಆದೇಶ ಮಾಡಿತ್ತು. ಆ ಪ್ರಕಾರ ವಾರದ ಬಳಿಕ RTPCR ಟೆಸ್ಟ್ ಮಾಡಿಸಿದಾಗ ಮತ್ತೆ ಪಾಸಿಟಿವ್ ಬರುತ್ತಿದ್ದು, ವಿದ್ಯಾರ್ಥಿಗಳು ನಕಲಿ ನೆಗೆಟಿವ್​ವರದಿಗಳನ್ನು ತರುತ್ತಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.

ಇನ್ನು ಜಿಲ್ಲಾಡಳಿತ ಗಡಿಭಾಗಗಳಲ್ಲಿ ಮತ್ತಷ್ಟು ಕಠಿಣ ತಪಾಸಣೆ ನಡೆಸಲು ಆದೇಶ ನೀಡಿದ್ದು, ಕೇರಳ ವಿದ್ಯಾರ್ಥಿಗಳ ನೆಗೆಟಿವ್​ ವರದಿಗಳ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಿದೆ.

LEAVE A REPLY

Please enter your comment!
Please enter your name here

Hot Topics

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...

ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.ಈ ಬಗ್ಗೆ...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...