Friday, August 19, 2022

ದಕ್ಷಿಣಕನ್ನಡ ಜಿಲ್ಲೆಯ 7 ಸಾವು ; 229 ಕೊರೊನಾ ಪಾಸಿಟಿವ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7825 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 498 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2349 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 244 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -133, ಬಂಟ್ವಾಳ -45, ಸುಳ್ಯ -5, ಬೆಳ್ತಂಗಡಿ – 4, ಪುತ್ತೂರು -22, ಬೆಳ್ತಂಗಡಿ -4 ಹೊರ ಜಿಲ್ಲೆಯವರು -10 ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

Hot Topics

ಇಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಭರದ ಸಿದ್ದತೆ-ನಾಳೆ ವಿಟ್ಲ ಪಿಂಡಿ

ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...