Thursday, February 9, 2023

ಬೆಳ್ತಂಗಡಿಯಲ್ಲಿ 23 ಕ್ವಿಂಟಾಲ್ ಅಕ್ರಮ ಅಕ್ಕಿ ಪತ್ತೆ-ಆರೋಪಿ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರು ಜಂಟಿಯಾಗಿ ಸಿಬ್ಬಂದಿ ಜೊತೆ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ.

ಗೂಡ್ಸ್ ವಾಹನ ಚಾಲಕ ಹಾಗೂ ಮಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪೂರ ನಿವಾಸಿ ನಂದೀಶ್ (24) ಬಂಧಿಸಲಾಗಿದೆ.


ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಸದಾಶಿವ ಸ್ಟೋರಿ ಸೇರಿದ ಗೋವಿಂದ ಸದನದ ಮನೆಯ ಪಕ್ಕದಲ್ಲಿರುವ ಗೋಡೌನ್ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ ಹಾಗೂ ಸಿಬ್ಬಂದಿಗಳು ಇಂದು ಮಧ್ಯಾಹ್ನ ದಾಳಿ ಮಾಡಿದ್ದಾರೆ.


ದಾಳಿ ವೇಳೆ ಗೋಡೌನ್ ನಲ್ಲಿ 14.5 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು ಅಶೋಕ್ ಲೆಲೈಂಡ್ ಗೂಡ್ಸ್ ವಾಹನದಲ್ಲಿ ತುಂಬಿಸಿಟ್ಟ 23 ಕ್ವಿಂಟಾಲ್ ಅಕ್ಕಿ‌, ತೂಕದ ಯಂತ್ರ ಪತ್ತೆಯಾಗಿದ್ದು ಅಧಿಕಾರಿಗಳು ವಶಪಡಿಸಿಕೊಳ್ಳಲಾಗಿದೆ‌.

ಇನ್ನೂ ಅಕ್ರಮ ಶೇಖರಿಸಿಟ್ಟ ಮನೆಯ ಗೋಡೌನ್ ಮತ್ತು ಅಂಗಡಿ ಮಾಲೀಕ ಸದಾಶಿವ ಶೆಣೈಗೆ ಸೇರಿದ್ದು ಅವರ ವಿನಾಯಕ ರೈಸ್ ಮಿಲ್ ನಲ್ಲಿ ಕೆಲಸಕ್ಕೆ ಇರುವ ವ್ಯಕ್ತಿಯೊಬ್ಬರಿಗೆ ಬಾಡಿಗೆ ನೀಡಿದ್ದಾರೆ ಎಂದು ತನಿಖೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಆಹಾರ ನಿರೀಕ್ಷಕ ವಿಶ್ವ.ಕೆ ದೂರು ನೀಡಿದ್ದಾರೆ.

ಅಕ್ರಮ ಪಡಿತರ ಅಕ್ಕಿ ದಾಸ್ತಾನು ಸ್ಥಳಕ್ಕೆ ದಾಳಿಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್‌, ಆಹಾರ ನಿರೀಕ್ಷಕ ವಿಶ್ವ‌.ಕೆ, ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮಸಹಾಯಕ ಗುಣಾಕರ ಹೆಗ್ಡೆ, ಅಭಿಲಾಷ್ , ಚಾಲಕ ಸಂತೋಷ್ ಕುಮಾರ್, ಪುಂಜಾಲಕಟ್ಟೆ ಪಿಎಸ್ಐ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...