Thursday, February 9, 2023

ಸ್ಕೂಟಿ ಸ್ಕಿಡ್ಡಾಗಿ ವಿದ್ಯುತ್‌ ಕಂಬ ಹಿಡಿದಾಗ ಕರೆಂಟ್‌ ಪ್ರವಹಿಸಿ ಯುವತಿ ಸಾವು

ಬೆಂಗಳೂರು: ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಾಗ ವಿದ್ಯುತ್‌ ಹರಿದು ಯುವತಿ ಸಾವನ್ನಪ್ಪಿದ ಘಟನೆ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ
ಅಕಿಲ (23) ಮೃತಪಟ್ಟ ಯುವತಿ.


ಘಟನೆ ವಿವರ
ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ವೈಟ್ ಫೀಲ್ಡ್ -ಮಾರತಹಳ್ಳಿ ಮುಖ್ಯರಸ್ತೆಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು.

ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು. ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ.

ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.


ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿ ಇಲ್ಲದೇ ಇರುವುದೇ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...