ದ.ಕ ಜಿಲ್ಲೆಯಲ್ಲಿ ಇಂದು ಒಂದೇ ದಿನ 238 ಕೊರೊನಾ ಸೋಂಕು ಪತ್ತೆ : ಆರು ಬಲಿ..!
ದ.ಕ ಜಿಲ್ಲೆಯಲ್ಲಿ ಇಂದು ಒಂದೇ ದಿನ 238 ಕೊರೊನಾ ಸೋಂಕು ಪತ್ತೆ : ಆರು ಬಲಿ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ ಆರು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಈ ಸಾವನ್ನಪ್ಪಿದವರಾಗಿದ್ದಾರೆ. ನಾಲ್ವರು ಪುರುಷರು ಮತ್ತು 47ಹಾಗೂ 76 ವರ್ಷದ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳೂರಿನ ಮುಲ್ಕಿ ನಿವಾಸಿ 44 ವರ್ಷದ ವ್ಯಕ್ತಿ, ಬೆಳಗಾವಿಯ ರಾಮದುರ್ಗ ನಿವಾಸಿ 68 ವರ್ಷದ ವೃದ್ಧ, ಮಂಗಳೂರಿನ 62 ವರ್ಷದ ವೃದ್ಧ, ಮಂಗಳೂರಿನ 66 ವರ್ಷದ ವೃದ್ಧ, ಬಂಟ್ವಾಳ ದ 47 ವರ್ಷದ ಮಹಿಳೆ ಮತ್ತು ಮಂಗಳೂರಿನ 76 ವರ್ಷದ ವೃದ್ಧೆ ಕೊರೊನಾ ದಿಂದ ಸಾವನ್ನಪ್ಪಿದ್ದಾರೆ.
ಇವರೆಲ್ಲರೂ ವಿವಿಧ ಖಾಯಿಲೆಯಿಂದ ಬಳಲುತ್ತಿದ್ದ ಸೋಂಕಿತರಾಗಿದ್ದು ಮಂಗಳೂರಿನ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.
ಇಂದು ದಾಖಲೆ ಸಂಖ್ಯೆಯ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ :
ಇನ್ನು ಇಂದು ದಾಖಲೆ ಸಂಖ್ಯೆಯ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಬರೋಬ್ಬರಿ 238 ಮಂದಿಯಲ್ಲಿ ಕೊರೋನಾ ಸೋಂಕು ಧೃಡಪಟ್ಟಿದೆ. ILI ಪ್ರಕರಣದಲ್ಲಿ – 106 ಮಂದಿಗೆ, ಸಂಪರ್ಕವೇ ಪತ್ತೆಯಾಗದ 73 ಮಂದಿ,ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ, ವಿದೇಶದಿಂದ ಬಂದ 19 ಜನರಿಗೆ ಮತ್ತು SARI ಪ್ರಕರಣದ 17 ಮಂದಿಗೆ ಕೊರೋನಾ ಪಾಸಿಟಿವ್ ಸೋಂಕು ದೃಡಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,738ಕ್ಕೆ ಏರಿಕೆಯಾಗಿದೆ.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
DAKSHINA KANNADA
ಮಂಗಳೂರು : ಬೈಕ್ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು
ಮಂಗಳೂರು : ಲಾರಿಯೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.
ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.
ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ
ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!
ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.
ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.