Sunday, May 16, 2021

ದ.ಕ ಜಿಲ್ಲೆಯಲ್ಲಿ ಮಂದಿನ 24 ಗಂಟೆಗಳು ಅಕ್ಸಿಜನ್ ಕೊರತೆಯಿಲ್ಲ:ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸ್ಪಷ್ಟನೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಆಕ್ಸಿಜನ್ ಕೊರತೆ ಎದುರಾಗಿಲ್ಲ, ಮುಂದಿನ 24 ಗಂಟೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ದಾಸ್ತಾನು ಜಿಲ್ಲೆಯಲ್ಲಿದೆ.ಆದ್ದರಿಂದ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಸ್ಪಷ್ಟಪಡಿಸಿದ್ದಾರೆ, ಚಾಮರಾಜ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ದುರಂತದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 66 ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಗೆ ಹೊರ ಜಿಲ್ಲೆ, ಪ್ರದೇಶಗಳಿಂದಲೂ ರೋಗಿಗಳು ಬರುತ್ತಿದ್ದಾರೆ

ಮುಂದಿನ 24 ಗಂಟೆಗಳಿಗೆ ಅಗತ್ಯಕ್ಕೆ ಬೇಕಾದಷ್ಟು ಅಕ್ಸಿಜನ್ ದಾಸ್ತಾನು ಜಿಲ್ಲೆಯಲ್ಲಿದ್ದು ಜನತೆ ಗಾಬರಿ- ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...