ಬೆಂಗಳೂರು : ಆ ಒಂದು ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಚಿತ್ರರಂಗವೇ ಕಂಗಾಲಾಗಿತ್ತು. ಅದುವೇ ವರನಟ ಡಾ. ರಾಜ್ ಕುಮಾರ್ ಅಪಹ*ರಣ. ಕಾಡುಗಳ್ಳ ವೀರಪ್ಪನ್ ಅಣ್ಣಾವ್ರನ್ನ ಅಪ*ಹರಿಸಿದ್ದ. ಆ ಒಂದು 108 ದಿನಗಳ ಡಾ.ರಾಜ್ ವನವಾಸದ ದಿನಕ್ಕೆ 24 ವರ್ಷಗಳಾಗಿವೆ. ಅಂದಿನಂತೆ ಇಂದೂ ಭೀಮನ ಅಮಾವಾಸ್ಯೆ.
ಕಾಡುಗಳ್ಳ ವೀರಪ್ಪನ್ 1980 ರಲ್ಲಿ ಕಾಡಿನಲ್ಲಿ ದುಷ್ಕೃತ್ಯ* ಆರಂಭಿಸಿದ್ದ. ಗಂಧದ ಕಳ್ಳ ಸಾಗಣೆ, ಆನೆದಂತ ಕಳವು ಹೀಗೆ ಅವನು ನಡೆಸುತ್ತಿದ್ದ ಕುಕೃ*ತ್ಯಗಳಿಗೆ ಪೊಲೀಸ್, ಅರಣ್ಯ ಇಲಾಖೆ ಅಧಿಕಾರಿಗಳು ಮಟ್ಟ ಹಾಕಲಾರಂಭಿಸಿದ್ದರು. ಇದರಿಂದ 1990ರ ದಶಕದ ಅಂತ್ಯದಲ್ಲಿ ಆರ್ಥಿಕ ಸಮಸ್ಯೆ ಕಾಡಲಾರಂಭಿಸಿತ್ತು. ಈ ವೇಳೆಯೇ ಆತ ಗಣ್ಯರ ಅಪಹ*ರಣಕ್ಕೆ ಕೈ ಹಾಕಿದ್ದ.
ಡಾ. ರಾಜ್ ಅಪಹರಣಗೈದ ವೀರಪ್ಪನ್ :
ದಪ್ಪ ಮೀಸೆಯ, ತೆಳ್ಳಗೆ ಮೈ, ಉದ್ದ ಶರೀರ ಹೊಂದಿದ್ದ ವೀರಪ್ಪನ್ ಹೆಸರೇ ಆಗೆಲ್ಲ ನಡುಕ ಹುಟ್ಟಿಸುತ್ತಿತ್ತು. ಯಾರಾದರೂ ದಪ್ಪ ಮೀಸೆಯವರನ್ನು ಕಂಡರೆ ಈಗಾಗಲೂ ವೀರಪ್ಪನ್ ಎನ್ನುವುದು ಚಾಲ್ತಿಯಲ್ಲಿದೆ. ಅಂದಹಾಗೆ, ಈ ದಂತಗಳ್ಳ ಹಣಕ್ಕಾಗಿ ಕನ್ನಡದ ದಿಗ್ಗಜ ನಟನತ್ತ ಕಣ್ಣು ಹಾಕಿದ್ದ.
ಜುಲೈ 30, 2000 ರಂದು ತಿರುಪತಿಗೆ ಹೋಗಿದ್ದ ರಾಜ್ಕುಮಾರ್ ಹುಟ್ಟೂರು ಗಾಜನೂರಿಗೆ ಬಂದಿದ್ದರು. ಕಟ್ಟಿಸಿದ್ದ ಹೊಸ ಮನೆಯ ಗೃಹಪ್ರವೇಶ ಮಾಡುವ ಯೋಜನೆಯಲ್ಲಿದ್ದರು. ಜುಲೈ 30 ರಂದು ರಾತ್ರಿ ಬಂದೂಕು ಹಿಡಿದು ಒಳನುಗ್ಗಿದ ಸುಮಾರು 15 ಮಂದಿ ರಾಜ್ಕುಮಾರ್, ನಾಗಪ್ಪ, ಎಸ್ಎ ಗೋವಿಂದರಾಜು, ನಾಗೇಶ್ ರನ್ನು ಅಪಹರಿಸಿದ್ದರು. ರಾಜ್ ಕುಮಾರ್ ಗೂ ಮೊದಲು ಆತ ವನ್ಯಜೀವಿ ಫೋಟೋಗ್ರಾಫರ್ ಗಳಾದ ಕೃಪಾಕರ್ ಮತ್ತು ಸೇನಾನಿಯನ್ನು ಅ*ಪಹರಿಸಿದ್ದ. ಪ್ರಾಧ್ಯಾಪಕರೊಬ್ಬರನ್ನು ಅಪ*ಹರಿಸಿದ್ದ ಆತನಿಗೆ ಲಾಭ ಏನೂ ಆಗಲಿಲ್ಲ. ಹಾಗಾಗಿಯೇ ಆತ ಗಣ್ಯರತ್ತ ಕಣ್ಣು ನೆಟ್ಟ.
ರಾಜ್ ಕುಮಾರ್ ಅಪಹರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು. ಪ್ರತಿಭಟನೆಗಳು ನಡೆದವು. 108 ದಿನಗಳ ಬಳಿಕ ರಾಜ್ ಕುಮಾರ್ ಅವರನ್ನು ಬಿಡುಗಡೆ ಮಾಡಿದ್ದ. ಸನ್ಮಾನ ಮಾಡಿಯೇ ಕಳುಹಿಸಿಕೊಟ್ಟಿದ್ದ.
ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು (31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ವಧು-ವರ ಶೋಧ ತಾಣಗಳಾದ ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಬಳಿಕ, “ನಿಮಗೆ ಸರ್ಕಾರಿ ನೌಕರಿ ಕೊಡಿಸಿ, ನಂತರ ಮದುವೆ ಆಗುತ್ತೇನೆ” ಎಂದು ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ್ದಾನೆ.
ದಾವಣಗೆರೆ ಮೂಲದ ಯುವತಿಯೊಬ್ಬಳಿಗೆ ಮೈಸೂರು ರೇಲ್ವೆ ವರ್ಕಶಾಪ್ನಲ್ಲಿ ಕೆಲಸ ಕೊಡಿಸುವುದಾಗಿ ಆರೋಪಿ ಮಧು 21 ಲಕ್ಷ ರೂಪಾಯಿ ತನ್ನ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾನೆ. ಹಣ ಖಾತೆಗೆ ಬಂದ ಬಳಿಕ ಸಂಪರ್ಕಕ್ಕೆ ಸಿಕ್ಕಿಲ್ಲ. ತಾನು ವಂಚನೆಗೆ ಒಳಗಾಗಿರವುದಾಗು ಯುವತಿ ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಆರೋಪಿ ಮಧು, ಚಿಕ್ಕಮಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 3.80 ಲಕ್ಷ ರೂ., ಮಂಡ್ಯ ಸಿಇಎನ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಯುವತಿಯಿಂದ 26 ಲಕ್ಷ ರೂ., ಬೆಂಗಳೂರು ಕಾಟನ್ ಪೇಟ್ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 2.8 ಲಕ್ಷ ರೂ., ಮೈಸೂರು ಸಿಇಎನ್ ಠಾಣೆಯ ಸೇರಿದಂತೆ ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಯುವತಿರಿಂದ ಒಟ್ಟು 62 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.
ಮ್ಯಾಟ್ರಿಮೋನಿಗಳ ಮೂಲಕ ವಂಚಕರು ಪರಿಚಯ ಮಾಡಿಕೊಂಡು ಹೆಣ್ಣು ಮಕ್ಕಳಿಗೆ ನಯವಾಗಿ ಮಾತನಾಡಿ ವಂಚಿಸುವವರ ಬಗ್ಗೆ ಹಾಗೂ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಹಾಕಿಸಿಕೊಂಡು ವಂಚಿಸುವವರ ಬಗ್ಗೆ ಜಾಗೃತರಾಗಿರಿ. ಇಂತಹ ಘಟನೆಗಳು ಕಂಡುಬಂದರೆ ಕೂಡಲೇ ಸ್ಥಳೀಯ ಠಾಣೆಗೆ ಹೋಗಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃ*ತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ.
ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ ತನ್ನ ಸೊಸೆಗೆ ಕರೆ ಮಾಡಿ ಏನು ವಿಷಯವನ್ನು ತಿಳಿಸಲು ಯತ್ನಿಸಿ ಕರೆಯನ್ನು ಕಟ್ ಮಾಡಿದ್ದಾರೆ. ಮತ್ತೆ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡದೆ ನಾಪತ್ತೆಯಾಗಿದ್ದರು.
ಉಗ್ಗಪ್ಪ ಅವರು ಮೊಬೈಲ್ ಕೂಡ ಮನೆಯಲ್ಲೇ ಬಿಟ್ಟು ಹೋಗಿದ್ದರು. ಎಲ್ಲ ಕಡೆ ಉಗ್ಗಪ್ಪ ಅವರನ್ನು ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪುತ್ರ ಅನಿಲ್ ಕುಮಾರ್ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇನ್ನು ಅದೇ ದಿನ ಉಳ್ಳಾಲ ರೈಲು ಹಳಿಯಲ್ಲಿ ಮೃ*ತದೇಹವೊಂದು ಪತ್ತೆಯಾಗಿದ್ದು, ಅದರ ವಾರಸುದಾರರು ಸಿಗದ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಗುರುವಾರ ಉಗ್ಗಪ್ಪ ಅವರ ಮನೆಯವರು ಬಂದು ಮೃ*ತದೇಹವನ್ನು ಅವರದ್ದೇ ಎಂದು ಖಚಿತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ(ನ.14) ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾಗುವುದು ಸುಲಭದ ಮಾತಲ್ಲ. ಯಾಕೆಂದರೆ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಆದ್ದರಿಂದ ಇದನ್ನು ತಡೆಯಲು ಸಮಾಜದ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಹೆತ್ತವರು, ಮನೆಯವರು ಮಕ್ಕಳ ಮೇಲೆ ನಿಗಾ ಇರಿಸಬೇಕು. ಪೊಲೀಸ್ ಇಲಾಖೆಯಲ್ಲಿ ಟೆಸ್ಟಿಂಗ್ ಕಿಟ್ ಸಿಗುತ್ತದೆ ಅದನ್ನು ಮನೆಯಲ್ಲಿಟ್ಟು ತಿಂಗಳಿಗೊಮ್ಮೆ ಪರೀಕ್ಷೆ ಮಾಡುವುದು ಯಾಕೆ ಕಷ್ಟ? ಈ ನಿಟ್ಟಿನಲ್ಲಿ ಜನಜಾಗೃತಿಯಾಗಬೇಕು. ಪ್ರತೀ ಕಾಲೇಜಿನಲ್ಲಿ ಇಂತಹ ಟೆಸ್ಟಿಂಗ್ ನಡೆದಾಗ ಮಕ್ಕಳು ಮಾದಕ ದ್ರವ್ಯ ಸೇವಿಸಲು ಭಯ ಪಡುತ್ತಾರೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ಕೊಡಿ ಇದರಿಂದ ಸ್ವಸ್ಥ ಸಮಾಜವನ್ನು ಕಟ್ಟಬಹುದು’’ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಮಾತಾಡಿ, “ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಬೇಡಿಕೆಯೂ ಹೌದು. ನಾನು ಮೊದಲ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದೆ. ಇಂದು ಪಂಜಾಬ್ ರಾಜ್ಯವನ್ನು ಡ್ರಗ್ಸ್ ದಂಧೆ ಬೆಂಬಿಡದೆ ಕಾಡುತ್ತಿದೆ. ಅಷ್ಟು ಭೀಕರವಾಗಿ ದಂಧೆ ಎಲ್ಲೆಡೆ ಹರಡಿದೆ. ಗಡಿಯಲ್ಲಿರುವ ಸೈನಿಕನಷ್ಟೇ ದೇಶವನ್ನು ಉಳಿಸುವ ಜವಾಬ್ದಾರಿ ಈ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಡುವವರದ್ದು. ಇದು ದೇವರು ಮೆಚ್ಚುವ ಕೆಲಸ. ಇಂತಹ ಕಾರ್ಯಕ್ರಮಕ್ಕೆ ಮಂಗಳೂರು ಮಾದರಿಯಾಗಬೇಕು“ ಎಂದರು.
ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ನಮ್ಮ ದೇಶವನ್ನು ನಾಶ ಮಾಡುವ ದುಷ್ಟ ಷಡ್ಯಂತ್ರ ಮಾದಕ ದ್ರವ್ಯ ವ್ಯಸನದಿಂದ ನಡೆಯುತ್ತಿದೆ. ಇದನ್ನು ತಡೆಯಲು ಮನೆಯಲ್ಲಿ ಸಮಾಜದಲ್ಲಿ ಜಾಗೃತಿಯಾಗಬೇಕು. ಮಾದಕ ದ್ರವ್ಯ ಸೇವನೆ, ಮಾರಾಟ ಕುರಿತು ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ನೀಡಬೇಕು. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕು’’ ಎಂದರು.
ಮಂಗಳೂರು ಮೇಯರ್ ಮನೋಜ್ ಕುಮಾರ್ ಮಾತನಾಡಿ, “ಯುವಜನತೆಯನ್ನು ವ್ಯವಸ್ಥಿತವಾಗಿ ಹಾಳು ಮಾಡುವ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಟ ನಿರಂತರವಾಗಿರಬೇಕು” ಎಂದರು.
ವೇದಿಕೆಯಲ್ಲಿ ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಮಂಗಳೂರು ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಆಶಾಜ್ಯೋತಿ ರೈ, ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ, ಎಸ್.ಡಿ.ಎಂ. ಕಾನೂನು ಕಾಲೇಜು ಪ್ರಾಂಶುಪಾಲ ಡಾ. ತಾರಾನಾಥ, ತಪಸ್ಯ ಫೌಂಡೇಶನ್ ಅಧ್ಯಕ್ಷೆ ಸಬಿತಾ ಆರ್. ಶೆಟ್ಟಿ, ಎಕ್ಕಾರ್ ರತ್ನಾಕರ್ ಶೆಟ್ಟಿ , ಸಬಿತ ಆರ್ ಶೆಟ್ಟಿ, ಅಧ್ಯಕ್ಷರು, ಎಕ್ಕಾರು ರತ್ನಾಕರ್ ಶೆಟ್ಟಿ, ವೃಂದಾ ಹೆಗ್ಡೆ ಕಾರ್ಯದರ್ಶಿ, ಮಾನಸ ರೈ ಜೊತೆ ಕಾರ್ಯದರ್ಶಿ, ಭಾರತಿ ಶೆಟ್ಟಿ ಖಜಾಂಚಿ ಮತ್ತಿತರರು ಉಪಸ್ಥಿತರಿದ್ದರು. ಸಬಿತಾ ಆರ್. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪುಷ್ಪರಾಜ್ ವಂದಿಸಿದರು.
Pingback: ಒಲಿಂಪಿಕ್ಸ್ 2024 : ಗ್ರೇಟ್ ಬ್ರಿಟನ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ - NAMMAKUDLA NEWS - ನಮ್ಮಕುಡ್ಲ ನ್ಯೂಸ