Saturday, October 1, 2022

ದಾವೂದ್‌ ಇಬ್ರಾಹಿಂ ಮಾಹಿತಿ ಕೊಟ್ರೆ 25 ಲಕ್ಷ ರೂ ಬಹುಮಾನ: ಎನ್‌ಐಎ

ನವದೆಹಲಿ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ 25 ಲಕ್ಷ ರೂ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ. ದಾವೂದ್‌ ಇಬ್ರಾಹಿಂ 1993ರ ಮುಂಬೈ ಸರಣಿ ಬಾಂಬ್‌ ದಾಳಿಯ ರೂವಾರಿಯಾಗಿದ್ದಾನೆ.


ಅದೇ ಹೊತ್ತಿಗೆ ದಾವೂದ್ ಆಪ್ತ ಸಹಾಯಕ ಶಕೀಲ್ ಶೇಖ್ ಅಲಿಯಾಸ್ ಛೋಟಾ ಶಕೀಲ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಿದೆ.


ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ‘ವಾಂಟೆಡ್’ ಲಿಸ್ಟ್‌ನಲ್ಲಿರುವ ದಾವೂದ್ ಸಹಚರರಾದ ಹಾಜಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ ಮತ್ತು ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮೊನ್ ಅಲಿಯಾಸ್ ಟೈಗರ್ ಮೆಮೊನ್ ಬಂಧನ ಮಾಹಿತಿಗೆ ತಲಾ 15 ಲಕ್ಷ ರೂ ನಗದು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕಳಸದಲ್ಲಿ ನದಿಗೆ ಬಿದ್ದು ಸಾವನ್ನಪ್ಪಿದ ಯುವಕ-ಮೃತದೇಹ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ...

ಮಂಗಳೂರು: ಪೋಸ್ಟ್‌ಮ್ಯಾನ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್...

ಮಂಗಳೂರು ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ : ಪಕ್ಕದ RTO ಆಫಿಸ್ ಫುಲ್ ಖಾಲಿ..!  

ಮಂಗಳೂರು : ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯ ಸಹಾಯಕನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.   ಇತ್ತ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ ಆಗಿ ಸಹಾಯಕ ಶಿವಾನಂದ ರೆಡ್ ಹ್ಯಾಂಡಾಗಿ ಸಿಕ್ಕಿ...