Tuesday, July 5, 2022

ಹೊಟೇಲ್‌ನಲ್ಲಿ ತಿಂಡಿ ಸೇವಿಸುತ್ತಿದ್ದಾಗ ಹೃದಯಾಘಾತದಿಂದ ಯುವಕ ಸಾವು

ಮೈಸೂರು: ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದಾಗ ಯುವಕ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.

ಕೇವಲ 25 ವರ್ಷದ ಕಾನೂನು ವಿದ್ಯಾರ್ಥಿ ನಿತಿನ್ ಮೃತಪಟ್ಟ ದುರ್ದೈವಿಯಾಗಿದ್ದು ಇಷ್ಟು ಚಿಕ್ಕ ವಯಸ್ಸಿಗೆ ಹಾರ್ಟ್ ಅಟ್ಯಾಕ್ ನಿಂದ ಮೃತಪಟ್ಟಿರುವುದು ಎಲ್ಲರಿಗೂ ಶಾಕ್ ನೀಡಿದೆ.

ಮೃತ ಯುವಕನನ್ನು ನಂಜಾಪುರ ಗ್ರಾಮದ ನಿತಿನ್ ಕುಮಾರ್(25) ಎಂದು ಗುರುತಿಸಲಾಗಿದೆ. ಹುಣಸೂರಿನ ಟಿಫಾನಿಸ್ ಹೋಂ ಹೋಟೆಲ್‌ನಲ್ಲಿ ನಿತಿನ್ ಏಕಾಏಕಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ.

ಬೆಳಗಿನ ತಿಂಡಿ ತಿನ್ನುವಾಗ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಯುವಕ ಕುಸಿದು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೃತ ನಿತಿನ್ ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಈತನ ಅಕಾಲಿಕ ಸಾವು ಕುಟುಂಬಸ್ಥರು, ಸ್ನೇಹಿತರಿಗೆ ಭಾರೀ ಆಘಾತವನ್ನು ನೀಡಿದೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...

ಮಂಗಳೂರು: ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್...

ಬಂಟ್ವಾಳ: ಯುವಕನನ್ನು ಇರಿದು ಮುಗಿಸಿದ ಸ್ನೇಹಿತರು…

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.ಆತನ ಸ್ನೇಹಿತ...