Connect with us

MANGALORE

ರಜತ ಸಂಭ್ರಮದಲ್ಲಿ ‘ವಿಜಯ ಯುವ ಸಂಗಮ ಎಕ್ಕಾರು’: ಬಡ ದಂಪತಿಗೆ ಮನೆ ಕೊಡುಗೆ

Published

on

ಕಿನ್ನಿಗೋಳಿ: ‘ಬಡವರಿಗೆ ಆಸರೆ ನೀಡುವುದು ಮಾನವ ಧರ್ಮ. ಆ ಕೆಲಸವನ್ನು ಎಕ್ಕಾರಿನ ವಿಜಯ ಯುವ ಸಂಗಮ ಮಾಡಿದೆ’ ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.


ವಿಜಯ ಯುವ ಸಂಗಮ ಎಕ್ಕಾರು ಇದರ ರಜತ ವರ್ಷದ ಅಂಗವಾಗಿ ಎಕ್ಕಾರು ಗ್ರಾಮದ ಕೆಂಚಗುಡ್ಡೆ ನಿವಾಸಿಗಳಾದ ವಿಮಲ ಕೇಶವ ದಂಪತಿಗೆ ಸಂಸ್ಥೆ ವತಿಯಿಂದ ನಿರ್ಮಿಸಲಾದ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿ ಯಾವುದೇ ವ್ಯಕ್ತಿಗೆ ತನಗೆ ಆಸರೆ ನೀಡುವ ಮನೆ ಇರಬೇಕು ಎಂಬ ಕನಸು ಇರುತ್ತದೆ.

ವಿಮಾಲ ಕೇಶವ ದಂಪತಿ ಸರಿಯಾದ ಸೂರು ಇಲ್ಲದೆ ಇರುವ ಸಂದರ್ಭ ಆ ಕುಟುಂಬದ ಕನಸನ್ನು ನನಸು ಮಾಡಿದವರು ವಿಜಯ ಯುವ ಸಂಗಮ. ಈ ಮೂಲಕ ಆ ಬಡ ಕುಟುಂಬ ನೆಮ್ಮದಿಯ ಜೀವನ ಸಾಧ್ಯವಾಯಿತು ಎಂದರು.


ಪತ್ರಕರ್ತೆ ವಿಜಯಲಕ್ಷೀ ಶಿಬರೂರು ಮಾತನಾಡಿ, ಸರಕಾರ ಮಾಡದಂತಹ ಕೆಲಸವನ್ನು ಒಂದು ಸಂಸ್ಥೆ ಮಾಡುದೆಂದರೆ ಅದು ವಿಶೇಷವೇ ಸರಿ, ಸರಕಾರ ಕೊಡುವ ಹಣದಲ್ಲಿ ಕಳಪೆ ಕಾಮಗಾರಿ ನಡೆಸುವ ಇಂದಿನ ದಿನದಲ್ಲಿ ಅತೀ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಮನೆ ನಿರ್ಮಿಸಿಕೊಟ್ಟಿದ್ದಾರೆ.

ಸರಕಾರ ಇಂತಹ ಸಂಸ್ಥೆಯ ಮೂಲಕ ಮನೆ ಕಟ್ಟಿಕೊಡುವ ಕೆಲಸ ಮಾಡಿದರೆ ಗುಣಮಟ್ಟದೊಂದಿಗೆ ಅನುದಾನದ ಸದುಪಯೋಗವಾಗುತ್ತದೆ, ಜಾತಿ ಧರ್ಮವನ್ನು ಮೀರಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡಬೇಕು, 25 ನೇ ವರ್ಷದ ಸಂಭ್ರಮದಲ್ಲಿ ಸಂಸ್ಥೆ ಅತ್ಯುತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುದು ಅಭಿನಂದನೀಯ ಇಂತಹ ಕಾರ್ಯಕ್ರಮ ಸಂಸ್ಥೆಯಿಂದ ನಿರಂತರ ಮುಂದುವರಿಯಲಿ ಎಂದರು.


ಪತ್ರಕರ್ತೆ ವಿಜಯಲಕ್ಷೀ ಶಿಬರೂರು ಮತ್ತು ಭಾಸ್ಕರ ಭಟ್ ಎಕ್ಕಾರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಎಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖ ರೈ, ಬಿಜೆಪಿ ಮಂಡಲಾಧ್ಯಕ್ಷ ಸುನೀಲ್ ಅಳ್ವ, ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ಈಶ್ವರ್ ಕಟೀಲ್, ಕಾರ್ಪೋರೇಟರ್ ಭಾಸ್ಕರಚಂದ್ರ ಶೆಟ್ಟಿ, ಸಂಸ್ಥೆಯ ಅಧ್ಯಕ್ಷ ಆದರ್ಶ್ ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರು ಸ್ವಾಗತಿಸಿ, ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending