Wednesday, September 28, 2022

ಕಾನ್​ಸ್ಟೇಬಲ್​​ ಪತ್ನಿಯ ಸರಗಳ್ಳತನ ಪ್ರಕರಣದ ಭೇದಿಸಿದಾಗ ಸಿಕ್ಕಿಬಿದ್ದರು 26 ಪ್ರಕರಣಗಳ ಖದೀಮರು..!

ಮಂಡ್ಯ : ಕಾನ್​ಸ್ಟೇಬಲ್​​ ಒಬ್ಬರ ಪತ್ನಿಯ ಸರಗಳ್ಳತನ ಪ್ರಕರಣದ ಬೆನ್ನು ಬಿದ್ದ ಮಂಡ್ಯ ಪೊಲೀಸರು ಆರೋಪಿಗಳನ್ನು ಹಿಡಿದುಬರೋಬ್ಬರಿ 26 ಪ್ರಕರಣಗಳನ್ನು ಭೇದಿಸಿದ್ದಾರೆ.

ಮೂವರು ಅಂತರ್‌ ಜಿಲ್ಲಾ ಸರಗಳ್ಳರನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನಾಭರಣ, ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಶ್ರೀನಗರದ ಎಸ್‌.ಕುಮಾರ್ , ಇಟ್ಟಮಡುವಿನ ವಿ.ಲಿಖಿತ್‌, ಪಿ.ನಿಖಿಲ್‌ ಬಂಧಿತ ಆರೋಪಿಗಳಾಗಿದ್ದಾರೆ. ಕುಮಾರ್‌ನನ್ನು ಕಾರಾಗೃಹದಿಂದ ವಶಕ್ಕೆ ಪಡೆಯಲಾಗಿದೆ.

ಇವರು ಡ್ರಗ್ ಸೇರಿದಂತೆ ಇತರ ದುಶ್ಚಟಗಳ ದಾಸರಾಗಿದ್ದು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು ಎಂದು ಎಸ್‌ಪಿ ಡಾ.ಎಂ.ಅಶ್ವಿನಿ ಮಾಹಿತಿ ನೀಡಿದ್ದಾರೆ.

ಏ. 26 ರಂದು ಡಿಎಆರ್‌ ಕಾನ್​ಸ್ಟೇಬಲ್ ಟಿ.ಪಿ. ಮಂಜೇಶ್ ಅವರ ಪತ್ನಿ ಟಿ.ಸಿ.ಲಕ್ಷ್ಮಿ ಅವರು, ಸ್ಕೂಟರ್‌ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಖದೀಮರು ಲಕ್ಷ್ಮಿ ಅವರನ್ನು ಬೀಳಿಸಿ ಚಾಕು ತೋರಿಸಿ ಅವರ ಬಳಿ ಇದ್ದ 40 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.

ಈ ಸಂಬಂಧ ನಾಗಮಂಗಲ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಆರೋಪಿಗಳು ಮೇ 14 ನಾಗಮಂಗಲ ತಾಲೂಕಿನ ದೇವಲಾಪುರ ಹ್ಯಾಂಡ್‌ ಪೋಸ್ಟ್‌ ಹತ್ತಿರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಂಡ್ಯ (06), ಮೈಸೂರು ಜಿಲ್ಲೆ (03), ಬೆಂಗಳೂರು (05), ಹಾಸನ (02), ಶಿವಮೊಗ್ಗ (01), ರಾಮನಗರ (02), ಕೋಲಾರ (04), ಚಿಕ್ಕಬಳ್ಳಾಪುರ (02), ತುಮಕೂರು ಜಿಲ್ಲೆಯ ಒಂದು ಸೇರಿದಂತೆ ಒಟ್ಟು 26 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಮೂವರೊಂದಿಗೆ ಇನ್ನೊಬ್ಬ ಸೇರಿದಂತೆ ನಾಲ್ವರು ಎರಡು ಬೈಕ್‌ನಲ್ಲಿ ಕಳ್ಳತನ ಮಾಡುತ್ತಿದ್ದರು. ಕೊಲೆ ಆರೋಪದ ಮೇಲೆ ಕುಮಾರ್‌ ಜೈಲಿಗೆ ಸೇರಿದ ನಂತರ ಇಬ್ಬರೇ ಸರಗಳ್ಳತನ ಮಾಡುತ್ತಿದ್ದರು.

26 ರಂದು 8 ಪ್ರಕರಣಗಳಲ್ಲಿ ಚಿನ್ನಾಭರಣ ನೀಡದ ಕಾರಣ ಅವರಿಗೆ ಚಾಕುವಿನಿಂದ ಚುಚ್ಚಿದ್ದಾರೆ.

ನಾಗಮಂಗಲದ ಪ್ರಕರಣದಲ್ಲಿ ಲಿಖಿತ್‌, ನಿಖಿಲ್‌ ಬಂಧಿಸಿದಾಗ ಕುಮಾರ್‌ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ನಂತರ ಆತನನ್ನು ವಶಕ್ಕೆ ಪಡೆದು ಪ್ರಕರಣಗಳ ವಿಚಾರಣೆ ನಡೆಸಲಾಯಿತು ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...