Friday, July 1, 2022

ಮುಲ್ಕಿ: ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ

ಮುಲ್ಕಿ: ಇಲ್ಲಿನ ಬಳ್ಕುಂಜೆಯ ಕೋಟ್ನಾಯಗುತ್ತು ಗುಡ್ಡೆಯಲ್ಲಿ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಮೃತ ಯುವಕನನ್ನು ಕಾರ್ಕಳದ ಕಲ್ಯಾ ನಿವಾಸಿ ಮೂಡಬಿದ್ರೆ ಒಂಟಿಕಟ್ಟೆ ಬಳಿ ವಾಸ್ತವ್ಯವಿದ್ದ ರಾಕೇಶ್ ಪೂಜಾರಿ (26) ಎಂದು ಗುರುತಿಸಲಾಗಿದೆ.
ಮೃತ ರಾಕೇಶ್ ಪೂಜಾರಿ ಮೂಡಬಿದ್ರೆಯಲ್ಲಿ ಫೈನಾನ್ಸ್ ನಲ್ಲಿ ಕಲೆಕ್ಷನ್ ಕೆಲಸ ಮಾಡುತ್ತಿದ್ದು ತೀವ್ರ ಹಣಕಾಸಿನ ಮುಗ್ಗಟ್ಟಿನಿಂದ ಬಳಲುತ್ತಿದ್ದ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಬಳಕುಂಜೆಯಲ್ಲಿರುವ ತನ್ನ ಮಿತ್ರನ ಕಾರನ್ನು ತಿರುಗಾಡಲೆಂದು ಕೊಂಡು ಹೋಗಿದ್ದ ರಾಕೇಶ್ ಪೂಜಾರಿ ವಾಪಸ್ಸು ಬಂದು ಬಳಕುಂಜೆ ಕೋಟ್ನಾಯಗುತ್ತು ರಸ್ತೆಬದಿಯಲ್ಲಿ ಇಟ್ಟು ಗುಡ್ಡೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರಾಕೇಶ್ ಪೂಜಾರಿ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನೆಯವರು ಹುಡುಕಾಡಿದಾಗ ನೇಣು ಬಿಗಿದ ರೀತಿಯಲ್ಲಿ ಮೃತದೇಹ ಗುಡ್ಡೆಯಲ್ಲಿ ಪತ್ತೆಯಾಗಿದೆ.

ಮೃತನ ಮಾವ ರಾಜೇಶ್ ಒಂಟಿಕಟ್ಟೆ ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿಯಲ್ಲಿ OTP ಫ್ರಾಡ್: ಕಾಲ್ ಮಾಡಿ 15 ಸಾವಿರ ಲಪಟಾಯಿಸಿದ ಭೂಪ

ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ‌ ನಿಡ್ಲೆ ಗ್ರಾಮದ ಬಿರ್ಲಾಜೆ...

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡಿದ ಇಲಾಖೆ

ಸುಳ್ಯ: ಲೈಸೆನ್ಸ್‌ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್‌ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.ಕ್ಲಿನಿಕ್‌ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...

ಪುತ್ತೂರು: ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ವರ್ಗಾವಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ, ಹೆಡ್‌ಕಾನ್‌ಸ್ಟೇಬಲ್‌ಗಳು ಮತ್ತು ಕಾನ್‌ಸ್ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ...