Connect with us

    LATEST NEWS

    ಉಡುಪಿ ಜಿಲ್ಲೆ 263 ಕೊರೊನಾ ಪಾಸಿಟಿವ್ ; 3 ಸಾವು

    Published

    on

    ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು 263 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ.


    ಉಡುಪಿ ಜಿಲ್ಲೆಯಲ್ಲಿ ಒಟ್ಟು 3966 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2738 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1448 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1290 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 69 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ -142, ಕುಂದಾಪುರ -95 , ಕಾರ್ಕಳ -23, ಜಿಲ್ಲೆಯ ಹೊರಗಿನ – 3 ಪ್ರಕರಣಗಳಿವೆ.

    LATEST NEWS

    ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್‌ ಅಪ*ಘಾತ – ಐವರು ಭಾರತೀಯ ಯೋಧರು ಹುತಾ*ತ್ಮ

    Published

    on

    ನವದೆಹಲಿ: ಲೇಹ್‌ನ ದೌಲತ್‌ ಬೇಗ್‌ ಓಲ್ಡಿ ಪ್ರದೇಶದ ಎಲ್‌ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್‌ ಅಪ*ಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾ*ತ್ಮರಾಗಿದ್ದಾರೆ.

    ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪ*ಘಾತದಲ್ಲಿ ಹುತಾ*ತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್‌ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್‌ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್‌ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್‌ನಲ್ಲಿ ಸಂಭವಿಸಿದ ದುರ*ದೃಷ್ಟಕರ ಅಪ*ಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ಸಚಿವರು ಪೋಸ್ಟ್‌ ಮಾಡಿದ್ದಾರೆ.

    Continue Reading

    DAKSHINA KANNADA

    ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ

    Published

    on

    ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾ*ತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿ*ಕ್ಕಿಯಾಗಿದೆ.

    ಈ ವೇಳೆ ಅಪಘಾ*ತ ತಪ್ಪಿಸಲು ಹೋಗಿ ಟೆಂಪೋವೊಂದು ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

    ಇದನ್ನೂ ಓದಿ : ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!

    ಇನ್ನು ರಸ್ತೆ ಸಂಚಾರ ಬಂದ್ ಮಾಡಿ, ಬಸ್ ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಯಿತು.

    Continue Reading

    LATEST NEWS

    ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ..! ನಾಲ್ವರ ಸಾ*ವು..!

    Published

    on

    ತಮಿಳುನಾಡು: ಪಟಾಕಿತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋ*ಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರ ಸತ್ತೂರಿನಲ್ಲಿ ನಡೆದಿದೆ.

    ಖಾಸಗಿ ಒಡೆತನದ ಪಟಾಕಿ ಫ್ಯಾಕ್ಟರಿಯಲ್ಲಿ ಒಂದಕ್ಕಿಂತ ಹೆಚ್ಚು ರಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ವಿರುದನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

    ನೇ*ಣಿಗೆ ಶರಣಾದ ಪಾಗಲ್ ಪ್ರೇಮಿ..! ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಜೀವಾಂ*ತ್ಯ..!!

    ಪಟಾಕಿ ಸ್ಫೋಟಗೊಂಡಂತೆ ಬೆಂಕಿ ವ್ಯಾಪಿಸಿದೆ. ಘಟನೆಯಿಂದಾಗಿ ಕಾರ್ಖಾನೆಯ ಒಂದು ಭಾಗದ ಕಟ್ಟಡ ನೆಲಸಮವಾಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೆಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟಕ್ಕೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಸಿಎಂ ಸ್ಟಾಲಿನ್‌ರವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

    Continue Reading

    LATEST NEWS

    Trending