Connect with us

LATEST NEWS

ಉಡುಪಿ ಜಿಲ್ಲೆ 263 ಕೊರೊನಾ ಪಾಸಿಟಿವ್ ; 3 ಸಾವು

Published

on

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು 263 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ.


ಉಡುಪಿ ಜಿಲ್ಲೆಯಲ್ಲಿ ಒಟ್ಟು 3966 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2738 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1448 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1290 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 69 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ -142, ಕುಂದಾಪುರ -95 , ಕಾರ್ಕಳ -23, ಜಿಲ್ಲೆಯ ಹೊರಗಿನ – 3 ಪ್ರಕರಣಗಳಿವೆ.

DAKSHINA KANNADA

ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

Published

on

ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

ಪ್ರಶಸ್ತಿ ವಿವರ :

ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

Continue Reading

LATEST NEWS

ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

Published

on

ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

Continue Reading

LATEST NEWS

ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !

Published

on

ಮಂಗಳೂರು/ಮಂಡ್ಯ: ರಾಜ್ಯದಲ್ಲಿ ಕಳ್ಳತನ ಎನ್ನುವುದು ಸಾಮಾನ್ಯವಾಗಿದೆ. ಕಳ್ಳರು ಕದ್ದ ಚಿನ್ನಾಭಾರಣಗಳನ್ನು ಎಲ್ಲಿಯಾದರೂ ಮಾರಿ ಬಿಡುತ್ತಾರೆ. ಆದರೆ ಕಳ್ಳರಲ್ಲೂ ಪ್ರಾಮಾಣಿಕತೆ ಇದೆ ಎಂದು ಮಂಡ್ಯದಲ್ಲಿ ಸಾಕ್ಷಿಯಾಗಿದೆ.

 

 

ಈ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರ ಕುಟುಂಬ ಮನೆದೇವರ ಪೂಜೆಗೆಂದು ಹೋಗಿದ್ದರು. ಈ ವೇಳೆ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದ ಕಳ್ಳರು ಬೀರುವನ್ನು ಒಡೆದು ಕಳ್ಳತನ ಮಾಡಿದ್ದರು. ಈ ವೇಳೆ 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂನ ಮೂರು ಜೊತೆ ಓಲೆಗಳು ಸೇರಿ ಒಟ್ಟು 75 ಗ್ರಾಂನಷ್ಟು ಚಿನ್ನಾಭರಣ ಕದ್ದಿದ್ದರು.

ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ 


ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಕಳ್ಳರಿಗೆ ಪೊಲೀಸರ ಭಯವೋ ಅಥವಾ ಮನೆದೇವರ ಆಶೀರ್ವಾದವೋ ಗೊತ್ತಿಲ್ಲ, ಪೊಲೀಸರಿಗೆ ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಮನೆಯ ಮುಂಭಾಗದ ಜಗಲಿಯ ಮೇಲೆ ಚಿನ್ನಾಭರಣಗಳನ್ನು ಇಟ್ಟು ಹೋಗಿದ್ದಾರೆ.
ಚಿನ್ನಾಭರಣ ವಾಪಸ್ಸು ಸಿಕ್ಕ ಖುಷಿಯಲ್ಲಿ ಸಿದ್ದೇಗೌಡರ ಕುಟುಂಬ ನಿರಾಳವಾಗಿದೆ.

Continue Reading

LATEST NEWS

Trending

Exit mobile version