ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: ಸ್ಪೋಟದ ತೀವ್ರತೆಗೆ 27ಮಂದಿ ದಾರುಣ ಸಾವು..!
ಆಡೆನ್: ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟವಾಗಿದ್ದು, 27 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಯೆಮೆನ್ ನ ಅಡೆನ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನೂತನವಾಗಿ ರಚನೆಯಾದ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನವೊಂದು ಇಳಿದ ಕೆಲವೇ ಕ್ಷಣಗಳ ಅಂತರದಲ್ಲಿ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಕನಿಷ್ಟ 26 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದಲ್ಲಿ ಯೆಮನ್‌ನ ರಾಷ್ಟ್ರಪತಿ ಅಬೆದ್ರಬ್ಬೊ ಮನ್ಸೂರ್ ಹಾದಿ ಅವರಿಂದ ಕೆಲ ದಿನಗಳ ಹಿಂದೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದ ಸಚಿವರು, ಅಡನ್‌ಗೆ ಆಗಮಿಸಿದ್ದರು.
ಇರಾನ್ ಬೆಂಬಲಿತ ಬಂಡುಕೋರರು ಈ ಹೇಡಿ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಸಚಿವರೆಲ್ಲರೂ ಸುರಕ್ಷಿತವಾಗಿದ್ದಾರೆ
50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಸರ್ಕಾರಿ ಮೂಲಗಳು ತಿಳಿಸಿವೆ. ಅಂತೆಯೇ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಸ್ಫೋಟದ ವೇಳೆ ವಿಮಾನದಿಂದ ಇಳಿದಿದ್ದ ಸರ್ಕಾರದ ಎಲ್ಲ ಸದಸ್ಯರೂ ಸುರಕ್ಷಿತವಾಗಿದ್ದಾರೆ’ ಎಂದೂ ಮಾಹಿತಿ ನೀಡಿದರು.ಯೆಮನ್‌ನ ಪ್ರಧಾನಿ ಮೊಯೀನ್ ಅಬ್ದುಲ್‌ಮಲಿಕ್ ಸಯೀದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಬಾಂಬ್ ಸ್ಫೋಟ ಹೇಡಿತನ ಕೃತ್ಯವಾಗಿದೆ. ಹಿಂಸಾಚಾರವನ್ನು ಒಪ್ಪುವುದಿಲ್ಲ,. ಭಯೋತ್ಪಾದಕ ದಾಳಿ ಯೆಮೆನ್ ಮತ್ತು ಅದರ ಜನರ ವಿರುದ್ಧ ನಡೆಸಿದ ಯುದ್ಧದ ಒಂದು ಭಾಗವಾಗಿದೆ.
ಸ್ಫೋಟದ ಹಿಂದಿನ ಕೈವಾಡದ ಕುರಿತು ಶೀಘ್ರತನಿಖೆ ನಡೆಯುತ್ತಿದ್ದು ನಿಜ ಬಣ್ಣ ಶೀಘ್ರದಲ್ಲೇ ಬಹಿರಂಗವಾಗಲಿದೆ. ಹಾಗೆಯೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಯೆಮೆನ್ ಪ್ರಧಾನಿ ತಿಳಿಸಿದ್ದಾರೆ.