Connect with us

    ಉಡುಪಿ ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ: 13563 ಮಂದಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು…

    Published

    on

    ಉಡುಪಿ ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ: 13563 ಮಂದಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು…

    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು (ಜೂನ್ 18) ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ.

    ಜಿಲ್ಲೆಯ 27 ಕೇಂದ್ರಗಳಲ್ಲಿ 13563 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ..

    ಉಡುಪಿ ಜಿಲ್ಲೆಯಲ್ಲಿ ನೋಂದಾಯಿಸಿಕೊಂಡಿದ್ದ 1344 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುತ್ತಾರೆ.

    ಹಾಗೂ ಹೊರ ಜಿಲ್ಲೆಗಳ 163 ಮಂದಿ ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಹೊರ ರಾಜ್ಯದ 23 ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಈ ಪಾಸ್ ನೀಡಿದ್ದಾರೆ.

    ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಘೋಷಿಸಿದ್ದು, ಜೆರಾಕ್ಸ್ ಅಂಗಡಿ ಮುಚ್ಚಿಸಲು ಹಾಗೂ ಭದ್ರತಾ ವ್ಯವಸ್ಥೆ ಒದಗಿಸಲು ಆದೇಶಿಸಲಾಗಿದೆ.

    ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿದ್ದು ಸಾಮಾಜಿಕ ಅಂತರ ಸಹಿತ ಪಾಲನೆ ಹಾಗೂ ಸ್ಯಾನಿಟೈಸರ್, ಮಾಸ್ಕ್ ಬಳಕೆಗೆ ಸೂಚಿಸಲಾಗಿದೆ.

    ಶೀತ ಜ್ವರ ಇರುವ ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

    ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್ ಕೇಂದ್ರವಾಗಿ ಬಳಸಿಕೊಂಡಿಲ್ಲ. ಎಲ್ಲಾ ಕೇಂದ್ರಗಳನ್ನೂ ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಒಟ್ಟು 69 ಮಾರ್ಗಗಳಲ್ಲಿ 91 ಕೆಎಸ್ಆರ್ಟಿಸಿ ಬಸ್ ಗಳನ್ನು ಬಳಸಲಾಗುತ್ತಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ

    Published

    on

    ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.

    ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.

    ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.

    Continue Reading

    LATEST NEWS

    ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

    Published

    on

    ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಾಜಸ್ಥಾನ್‌ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಮೂಳೆ ಸಿಕ್ಕಿದ್ದು ದನದ್ದು, ಮನುಷ್ಯನದಲ್ಲ

    Published

    on

    ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಢಪಟ್ಟಿದೆ.

    ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.

    ಆದರೆ ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂಬುದು ದೃಢಪಟ್ಟಿದೆ.

    Continue Reading

    LATEST NEWS

    Trending